Advertisement

ಉಪಚುನಾವಣೆ ಕದನ, ಸಿದ್ದರಾಮಯ್ಯ ಬಳೆ ತೊಟ್ಟುಕೊಳ್ಳಲಿ: ಶೋಭಾ ಕರಂದ್ಲಾಜೆ

09:10 AM May 17, 2019 | Team Udayavani |

ಹುಬ್ಬಳ್ಳಿ: ಅಸಮಾಧಾನಗೊಂಡಿರುವ ಶಾಸಕರನ್ನು ಸಮಾಧಾನಪಡಿಸಿ ತಮ್ಮ ಹಿಡಿತದಲ್ಲಿ ಇಟ್ಟುಕೊಳ್ಳಬೇಕಾದದ್ದು ಸಿದ್ದರಾಮಯ್ಯ ಅವರ ಕೆಲಸ. ಆದರೆ, ಈ ಕೆಲಸ ಮಾಡಲು ನೀವು ಬಲಹೀನರು. ನಿಮ್ಮ ಶಾಸಕರು ಎಲ್ಲಿದ್ದಾರೆ, ಏನು ಮಾಡುತ್ತಿದ್ದಾರೆ ಎಂಬುದನ್ನು ಅರಿತು, ಅವರನ್ನು ಹಿಡಿತದಲ್ಲಿಟ್ಟುಕೊಳ್ಳಲು ಅಸಾಧ್ಯ ಎನ್ನುವುದಾದರೆ ಬಳೆ ತೊಟ್ಟಿಕೊಳ್ಳಿ ಎಂದು ಶೋಭಾ ಕರಂದ್ಲಾಜೆ ಟೀಕಿಸಿದ್ದು, ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ.

Advertisement

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಳೆ ತೊಟ್ಟುಕೊಳ್ಳಲಿ ಎಂಬ ಹೇಳಿಕೆಗೆ, ಕುಮಾರಿ ಶೋಭಾ ಅವರೇ, ಓರ್ವ ಹೆಣ್ಣಾಗಿ ತಾವು ಮಹಿಳಾ ಸಂಕುಲವೇ ಅಸಮರ್ಥರು ಎಂಬಂತೆ ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ. ಸಂಸದರಾಗಿ ತಾವೊಬ್ಬರು ಸರಿಯಾಗಿ ಕೆಲಸ ಮಾಡಿಲ್ಲ ಎಂಬ ಮಾತ್ರಕ್ಕೆ ಬಳೆ ತೊಟ್ಟವರೆಲ್ಲ ಕೆಲಸ ಮಾಡಲಾಗದವರು ಎಂದಲ್ಲ. ನೆನಪಿರಲಿ, ಚೆನ್ನಮ್ಮ, ಓಬವ್ವ, ಇಂದಿರಾಗಾಂಧಿ ಇವರೆಲ್ಲ ಬಳೆ ತೊಟ್ಟೆ ಸಾಧನೆಯ ಉತ್ತುಂಗಕ್ಕೇರಿದವರು ಎಂದು ಟ್ವೀಟ್ ಮೂಲಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next