ಬೆಂಗಳೂರು: ರೈತರು ತನ್ನ ಶತ್ರುಗಳೆಂದು ತಿಳಿದುಕೊಂಡಿರುವ ಬಿಜೆಪಿಯು, ಅವರನ್ನು ಪೊಲೀಸರ ಮೂಲಕ ದಮನಿಸಲು ಪ್ರಯತ್ನಿಸಿ ವಿಫಲವಾದ ನಂತರ ಈಗ ನೇರವಾಗಿ ಹತ್ಯೆ ನಡೆಸಲು ಹೊರಟಿದ ಎಂದು ರಾಜ್ಯ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮಾಡಿರುವ ಅವರು, ಉತ್ತರ ಪ್ರದೇಶದಲ್ಲಿ ಸಚಿವರ ಮಗನ ಕಾರಿನಡಿಗೆ ಸಿಕ್ಕಿ ರೈತರು ಸಾವಿಗೀಡಾದ ಪ್ರಕರಣ ಬಿಜೆಪಿಯ ಕೊಲೆಗಡುಕ ಮನಸ್ಸಿಗೆ ಸಾಕ್ಷಿ ಎಂದಿದ್ದಾರೆ.
ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಗೂಂಡಾ ರಾಜ್ಯದಲ್ಲಿ ದಲಿತರು, ರೈತರು, ಮಹಿಳೆಯರು ಮತ್ತು ಬಡವರ ಮಾನ-ಪ್ರಾಣ ಯಾವುದೂ ಸುರಕ್ಷಿತ ಅಲ್ಲ. ಸಂವಿಧಾನವೇ ಕುಸಿದು ಬಿದ್ದಿರುವ ಸ್ಥಿತಿಯಲ್ಲಿ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಅಲ್ಲಿನ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.
ಇದನ್ನೂ ಓದಿ:ಲಖೀಂಪುರ ಹಿಂಸಾಚಾರ: ಮೃತಪಟ್ಟ 4 ರೈತರ ಕುಟುಂಬಕ್ಕೆ 45 ಲಕ್ಷ ರೂ
ಪ್ರತಿರೋಧ- ಭಿನ್ನಾಭಿಪ್ರಾಯವನ್ನು ಸಹಿಸದ ಬಿಜೆಪಿ ತನ್ನ ತಾಲಿಬಾನಿ ಮನಸ್ಥಿತಿಯನ್ನು ಬೆತ್ತಲು ಮಾಡಿಕೊಳ್ಳುತ್ತಿದೆ. ರೈತರ ಹತ್ಯೆ ನಡೆದ ಸ್ಥಳಕ್ಕೆ ಭೇಟಿ ನೀಡಲು ಹೊರಟ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವ ಯೋಗಿ ಆದಿತ್ಯನಾಥ್ ಸರ್ಕಾರದ ಕೃತ್ಯ ಖಂಡನೀಯ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.