Advertisement

BSY ಜೈಲಿಗೆ ಹೋಗೋದನ್ನು ತಪ್ಪಿಸಿಕೊಳ್ಳಲಿ: ಸಿಎಂ ತಿರುಗೇಟು

12:20 PM Aug 19, 2017 | Team Udayavani |

ಬೆಂಗಳೂರು:ನಮ್ಮನ್ನು ಜೈಲಿಗೆ ಕಳುಹಿಸುವ ಮೊದಲು ಬಿಎಸ್ ಯಡಿಯೂರಪ್ಪ ಜೈಲಿಗೆ ಹೋಗುವುದುನ್ನು ತಪ್ಪಿಸಿಕೊಳ್ಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ತಿರುಗೇಟು ನೀಡಿದ್ದಾರೆ.

Advertisement

ಮರಳು ದಂಧೆಯಲ್ಲಿ ಮಹದೇವಪ್ಪ ಮಗ, ನಿನ್ನ (ಸಿದ್ದರಾಮಯ್ಯ) ಮಗ ಹಗರಣದಲ್ಲಿ ಶಾಮೀಲಾಗಿದ್ದಾರೆ. ಹಾಗಾಗಿ ಅಪ್ಪ, ಮಗ ಹಾಗೂ ಸಚಿವರ ಜಾತಕವನ್ನು ಮುಂದಿನ ದಿನಗಳಲ್ಲಿ ಬಯಲು ಮಾಡುತ್ತೇನೆ ಎಂದು ಬಿಎಸ್ ಯಡಿಯೂರಪ್ಪ ಶುಕ್ರವಾರ ವಾಗ್ದಾಳಿ ನಡೆಸಿದ್ದರು.

ಈ ಕುರಿತು ಸುದ್ದಿಗಾರರು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದಾಗ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ಕೊಟ್ಟಾಗ ಯಡಿಯೂರಪ್ಪನಿಗೆ ಕ್ಲಾಸ್ ತೆಗೆದುಕೊಂಡಿದ್ದರು. ಹಾಗಾಗಿ ಹತಾಶರಾಗಿರುವ ಯಡಿಯೂರಪ್ಪ ಏನೇನೋ ಮಾತನಾಡುತ್ತಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next