Advertisement

ಬಿಎಸ್ ವೈ ಅವರೇ ಈ ಕೆಲಸಗಳಿಗೆ ಅಡ್ಡಗಾಲು ಹಾಕಿದರೆ ಬಡವರ ಶಾಪ ತಟ್ಟದೆ ಇರದು: ಸಿದ್ದರಾಮಯ್ಯ

02:05 PM Apr 25, 2021 | Team Udayavani |

ಬೆಂಗಳೂರು: ಕರ್ನಾಟಕವನ್ನು ಹಸಿವು ಮುಕ್ತ ರಾಜ್ಯ ಮಾಡುವ ಉದ್ದೇಶದಿಂದ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್, ಮಾತೃಪೂರ್ಣ ಮೊದಲಾದ ಯೋಜನೆಗಳನ್ನು ಜಾರಿಗೆ ತಂದಿದ್ದೆ. ಅವೆಲ್ಲವನ್ನೂ ಬಡವರ ವಿರೋಧಿ ಬಿಜೆಪಿ ಸರ್ಕಾರ ನಿಲ್ಲಿಸಲು ಹೊರಟಿದೆ. ಅವುಗಳಿಗೆ ಅಡ್ಡಗಾಲು ಹಾಕಿದರೆ ಬಡವರ ಶಾಪ ತಟ್ಟದೆ ಇರದು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಅನ್ನಭಾಗ್ಯ ಯೋಜನೆ ಎಂದರೆ ಉರ್ಕೊಳ್ಳುತ್ತಿದ್ದ ಮತ್ತು ಆ ಯೋಜನೆಗೆ ಕಲ್ಲು ಹಾಕಲು ಪ್ರಯತ್ನಿಸುತ್ತಿರುವ ಬಿಜೆಪಿ ನಾಯಕರು, ಈಗ ಪ್ರಧಾನಿ ಘೋಷಿಸಿರುವ ಎರಡು ತಿಂಗಳ ಕಾಲ ಐದು ಕಿಲೋ ಅಕ್ಕಿ ನೀಡುವ ಯೋಜನೆಯನ್ನು ಕೊಂಡಾಡುತ್ತಿರುವುದು ತಮಾಷೆಯಾಗಿದೆ ಎಂದು ಟೀಕಿಸಿದ್ದಾರೆ.

ಕೊರೊನಾದಿಂದ ತೀವ್ರ ಸಂಕಷ್ಟಕ್ಕೀಡಾಗಿರುವ ಜನರಿಗೆ ಪ್ರತಿ ತಿಂಗಳು ಉಚಿತವಾಗಿ ಹತ್ತು ಕಿಲೋ ಅಕ್ಕಿ ನೀಡಬೇಕೆಂದು ಪ್ರಾರಂಭದಿಂದಲೂ ಒತ್ತಾಯಿಸುತ್ತಾ ಬಂದಿದ್ದೇನೆ. ಪ್ರಧಾನಿಯವರು ಈಗಲಾದರೂ ಎಚ್ಚೆತ್ತುಕೊಳ್ಳಿ. ಕೊರೊನಾ‌ ಕಷ್ಟ ಕೊನೆಯಾಗುವ ವರೆಗಾದರೂ ಹತ್ತು ಕಿಲೋ ಅಕ್ಕಿ ನೀಡಿ ಪುಣ್ಯ ಕಟ್ಕೊಳ್ಳಿ ಎಂದಿದ್ದಾರೆ.

ಇದನ್ನೂ ಓದಿ:ಮೂಗಿಗೆ ನಿಂಬೆ ರಸ ಹಾಕಿದರೆ ಉಸಿರಾಟದ ಸಮಸ್ಯೆ ಪರಿಹಾರವಾಗುತ್ತದೆ: ವಿಜಯ ಸಂಕೇಶ್ವರ

ಅನ್ನಭಾಗ್ಯ ಯೋಜನೆಯನ್ನು ನಿಲ್ಲಿಸಲು ಶತಪ್ರಯತ್ನ ಮಾಡುತ್ತಿರುವ ರಾಜ್ಯ ಸರ್ಕಾರ ಹಲವಾರು ಜಿಲ್ಲೆಗಳಲ್ಲಿ ತಿಂಗಳಿಗೆ ಐದು‌ ಕಿಲೋ ಅಕ್ಕಿ ಬದಲಿಗೆ ಎರಡು ಕಿಲೋ ಅಕ್ಕಿ ನೀಡುತ್ತಿದೆ. ಮುಖ್ಯಮಂತ್ರಿಯವರೇ, ಈ ಅನ್ಯಾಯವನ್ನು ತಕ್ಷಣ ಸರಿಪಡಿಸಿ. ಬಡವರ ಶಾಪಕ್ಕೆ ಈಡಾಗಬೇಡಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ಔಷಧಿ,‌ ಆಮ್ಲಜನಕ, ವೆಂಟಿಲೇಟರ್ ಕೊಡಿ ಎಂದು‌ ಪ್ರಧಾನಿ ಅವರನ್ನು ಬೇಡುತ್ತಿರುವ  ಮುಖ್ಯಮಂತ್ರಿಗಳನ್ನು ಕಂಡಾಗ‌ ಕನಿಕರ ಮೂಡುತ್ತಿದೆ. 25 ಬಿಜೆಪಿ ಸಂಸದರು ಎಲ್ಲಿ ಅಡಗಿ ಕೂತಿದ್ದಾರೆ? ಅವರನ್ನು ದೆಹಲಿಗೆ ಅಟ್ಟಿ ರಾಜ್ಯದ ನ್ಯಾಯಬದ್ಧ ಪಾಲಿಗಾಗಿ ಪ್ರಧಾನಿ ಮನೆ ಮುಂದೆ ಧರಣಿ ಕೂರಿಸಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಲಸಿಕೆ‌ ಪಡೆಯುವುದನ್ನು ಪ್ರೊತ್ಸಾಹಿಸಬೇಕಾದ ಬಿಜೆಪಿ ಸರ್ಕಾರ, ಅದರ ಬೆಲೆ ಏರಿಸಿ ಜನತೆ ಅದನ್ನು ಪಡೆಯದಂತೆ ಮಾಡಲು ಹೊರಟಿದೆ. ನರೇಂದ್ರ ಮೋದಿಯವರೇ, ‘ಟೀಕಾ ಉತ್ಸವ್’ ನಂತಹ ಬಾಯಿ ಬಡಾಯಿಯನ್ನು ಬಿಟ್ಟಾಕಿ ಮೊದಲು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:ಮಹಿಳೆಯರು ಋತುಚಕ್ರದ ಐದು ದಿನಗಳ ಮೊದಲು ಮತ್ತು ನಂತರ ಕೋವಿಡ್ ಲಸಿಕೆ ಪಡೆಯಬಹುದೆ?

Advertisement

Udayavani is now on Telegram. Click here to join our channel and stay updated with the latest news.

Next