Advertisement

ಗ್ರಾಮೀಣ ಪ್ರದೇಶದ ಜನತೆ ಲಾಕ್ ಡೌನ್ ವಿರುದ್ಧ ದಂಗೆ ಎದ್ದರೂ ಆಶ್ಚರ್ಯವಿಲ್ಲ: ಸಿದ್ದರಾಮಯ್ಯ

11:55 AM May 09, 2021 | Team Udayavani |

ಬೆಂಗಳೂರು: ಕೋವಿಡ್ ರೋಗಕ್ಕಿಂತ ಹೆಚ್ಚಾಗಿ ಇಲ್ಲಿನ ರೋಗಗ್ರಸ್ತ ಬಿಜೆಪಿ ಸರ್ಕಾರದಿಂದ ರಾಜ್ಯದ ಜನತೆ ಬವಣೆ ಪಡುವಂತಾಗಿದೆ. ಸೋಮವಾರದಿಂದ ಜಾರಿಗೆ ಬರಲಿರುವ ಲಾಕ್‌ಡೌನ್ ಗೊಂದಲದ ಗೂಡಾಗಿದ್ದು ಗ್ರಾಮೀಣ ಪ್ರದೇಶದ ಜನತೆ ಇದರ ವಿರುದ್ಧ ದಂಗೆ ಎದ್ದರೂ ಆಶ್ಚರ್ಯ ಇಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪರಿಷ್ಕೃತ ಲಾಕ್‌ಡೌನ್ ಅನ್ವಯ ಬೆಳಿಗ್ಗೆ ಆರರಿಂದ ಹತ್ತರ ವರೆಗೆ ದಿನಸಿ, ತರಕಾರಿ, ಮೀನು-ಮಾಂಸದ ಅಂಗಡಿಗಳು ತೆರೆಯಲು ಅವಕಾಶ ನೀಡಿ ಈ ಅವಧಿಯಲ್ಲಿ ವಾಹನ ಸಂಚಾರ ಮಾತ್ರ ನಿಷೇಧಿಸಿರುವುದು ಬಿಜೆಪಿ ಸರ್ಕಾರದ ಮೂರ್ಖತನದ ನಿರ್ಧಾರ ಎಂದಿದ್ದಾರೆ.

ಇದನ್ನೂ ಓದಿ:ಅಂಗಡಿ ಬಾಗಿಲು ಮುಚ್ಚಿ ಬಟ್ಟೆ ವ್ಯಾಪಾರ: ವಿಟ್ಲದಲ್ಲಿ ಪೊಲೀಸರಿಂದ ದಾಳಿಯ ವಿಡಿಯೋ ವೈರಲ್

ಗ್ರಾಮೀಣ ಪ್ರದೇಶಗಳಲ್ಲಿ ಅಂಗಡಿ-ಮುಂಗಟ್ಟುಗಳು 2-3 ಕಿ.ಮೀ.ದೂರದಲ್ಲಿವೆ. ಅಲ್ಲಿಂದ ಮನೆ ಸಾಮಾನುಗಳನ್ನು ಹಿರಿಯರು, ಅಶಕ್ತರು ಹೊತ್ತುಕೊಂಡು ಬರಬೇಕೇ ಮುಖ್ಯಮಂತ್ರಿಗಳೇ? ಆಯಾಸ-ಪ್ರಯಾಸದಿಂದ  ಅವರಿಗೇನಾದರೂ ಆಗಿಬಿಟ್ಟರೆ ಯಾರು ಹೊಣೆ? ಈ ಸಾಮಾನ್ಯ ಜ್ಞಾನವೂ ಆಡಳಿತ ನಡೆಸುವವರಿಗೆ ಬೇಡವೇ? ಹೊಸ‌ ಲಾಕ್‌ಡೌನ್ ನಿಯಮಾವಳಿ ಪ್ರಕಾರ ಗ್ರಾಮೀಣ ಪ್ರದೇಶದಲ್ಲಿ ಬ್ಯಾಂಕು, ಎಟಿಎಂ ಆಸ್ಪತ್ರೆ ತೆರೆದಿರುತ್ತದೆ. ಆದರೆ ಅಲ್ಲಿಗೆ ಗ್ರಾಹಕರು ಮತ್ತು ಅಸ್ವಸ್ಥರು  ವಾಹನ ಬಳಸಲು ನಿಷೇಧ ಇದೆ. ಹೊಟೇಲ್‌ನಲ್ಲಿ ಪಾರ್ಸಲ್‌ಗೆ ಅವಕಾಶ ಇದೆ. ವಾಹನ ಮಾತ್ರ ಬಳಸುವಂತಿಲ್ಲ. ಇದೆಂತಹ ತುಘಲಕ್ ಸರ್ಕಾರ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಕೋವಿಡ್ ನಿಯಂತ್ರಣಕ್ಕೆ ಹೀಗೆ ಮಾಡಿ: ಸರ್ಕಾರಕ್ಕೆ ಹಲವು ಸಲಹೆ ನೀಡಿದ ಸಿದ್ದರಾಮಯ್ಯ

Advertisement

ಹೊಸ ಲಾಕ್ ಡೌನ್ ಜಾರಿಗೆ ತರಲು ಹೊರಟಿರುವ  ರಾಜ್ಯದ ಆಡಳಿತಗಾರರು ಮತ್ತು ಅಧಿಕಾರಿಗಳು ಮೊದಲು ಬೆಂಗಳೂರಿನ ಹವಾನಿಯಂತ್ರಿತ ಕಚೇರಿಯಿಂದ ಹೊರಬಂದು ಹಳ್ಳಿಗಳಿಗೆ ಭೇಟಿ ನೀಡಿಅಲ್ಲಿನ ವಾಸ್ತವ ಸ್ಥಿತಿಯನ್ನು ಅರಿಯಲಿ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next