Advertisement

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

11:30 PM May 02, 2024 | Team Udayavani |

ಶಿವಮೊಗ್ಗ: ಲೋಕಸಭೆಯಲ್ಲಿ ಕರ್ನಾ ಟಕದ ಧ್ವನಿಯಾಗಿ ಕೆಲಸ ಮಾಡುವಂಥವರನ್ನು ಮತದಾರರು ಆಯ್ಕೆ ಮಾಡಬೇಕು. ಕಳೆದ ಬಾರಿ ರಾಜ್ಯದಿಂದ 25 ಸಂಸದರು ಬಿಜೆಪಿಯಿಂದ ಆಯ್ಕೆಯಾದರು. ಆದರೆ ಯಾರೂ  ಕೇಂದ್ರದಿಂದ ಕನ್ನಡಿಗರಿಗೆ ಆದ ಅನ್ಯಾಯದ ಬಗ್ಗೆ ಮಾತ ನಾಡಲಿಲ್ಲ. ಚುನಾವಣೆ ವೇಳೆ ಮಾತ್ರ ಮೋದಿಗೆ ಕರ್ನಾಟಕ ನೆನಪಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

Advertisement

ಇಲ್ಲಿನ ಅಲ್ಲಮಪ್ರಭು ಮೈದಾನದಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ ಯಾತ್ರೆ-2 ಕಾರ್ಯಕ್ರಮಲ್ಲಿ ಮಾತನಾ ಡಿದ ಅವರು, ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ.  ರಾಜ್ಯಕ್ಕೆ ನಿರಂ ತರ ಅನ್ಯಾಯ ಆಗುತ್ತಿದ್ದರೂ ರಾಜ್ಯದ ಪರವಾಗಿ ಸಂಸತ್‌ನಲ್ಲಿ ನೆಪಕ್ಕೂ ಬಾಯಿ ಬಿಡದ ಬಿ.ವೈ.ರಾಘವೇಂದ್ರ ಸಂಸದರಾಗಿದ್ದೇ ವೇಸ್ಟ್‌. ಬಿಜೆಪಿ ಯಿಂದ ಗೆದ್ದ 25 ಮಂದಿ ಸಂಸದರು ರಾಜ್ಯದ ಪರವಾಗಿ ಯಾವತ್ತೂ ಧ್ವನಿ ಎತ್ತಲಿಲ್ಲ. ಇಂಥವರನ್ನು ಗೆಲ್ಲಿಸಿದರೆ ಯಾರಿಗೂ ಪ್ರಯೋಜನವಿಲ್ಲ ಎಂದರು.

ಬರಗಾಲ, ಪ್ರವಾಹ ಬಂದಾಗ  ಮೋದಿಗೆ ಕರ್ನಾಟಕ ನೆನಪಾಗಿಲ್ಲ. ಚುನಾವಣೆ ಬಂದಾಗ ಬರುತ್ತಾರೆ. ರಾಜ್ಯ ನೆನಪಾಗಲಿಲ್ಲ. ರಾಜ್ಯಕ್ಕೆ ಮೋದಿ ನಿರಂತರವಾಗಿ ಅನ್ಯಾಯ ಮಾಡುತ್ತಿದ್ದಾರೆ. ಅವರು ದ್ವೇಷದ ರಾಜಕಾರಣ ಮಾಡಿ, ಮಲತಾಯಿ ಧೋರಣೆಯನ್ನು ತೋರುತ್ತಿದ್ದಾರೆ. ಪ್ರವಾಹ ಅಥವಾ ಬರಗಾಲ ಬಂದಾಗ ರಾಜ್ಯಕ್ಕೆ ಬಂದು ಜನರ ಕಷ್ಟ-ಸುಖ ಕೇಳುವ ಪ್ರಯತ್ನವನ್ನೂ ಮೋದಿ ಮಾಡಲೇ ಇಲ್ಲ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಗೆಲುವು ಸಾಧಿ ಸಲಿದ್ದಾರೆ ಎಂಬ ನಂಬಿಕೆ ಇದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next