Advertisement

ಸಂತ್ರಸ್ತರಿಗೆ ಸ್ಪಂದಿಸಲು ಪುತ್ರನನ್ನು ಕಳುಹಿಸಿಕೊಟ್ಟ ಸಿದ್ದು

01:05 AM Aug 10, 2019 | Sriram |

ಬೆಂಗಳೂರು: ಸ್ವ ಕ್ಷೇತ್ರ ಬಾದಾಮಿ ಸೇರಿ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಸಂತ್ರಸ್ತರ ನೆರವಿಗೆ ಸ್ಪಂದಿಸಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪುತ್ರ ಯತೀಂದ್ರ ಅವರನ್ನು ಕಳುಹಿಸಿದ್ದಾರೆ.

Advertisement

‘ನಾಲ್ಕು ದಿನದ ಹಿಂದೆ ನಾನು ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ವೈದ್ಯರು ಕೆಲವು ದಿನಗಳ ಕಡ್ಡಾಯ ವಿಶ್ರಾಂತಿ ಸೂಚಿಸಿದ್ದಾರೆ. ಈ ನಡುವೆ, ಉತ್ತರ ಕರ್ನಾಟಕ ಭಾಗ ಪ್ರವಾ ಹಕ್ಕೆ ಸಿಲುಕಿ ನಲುಗಿ ಹೋಗಿದೆ. ಅಲ್ಲಿ ಹೋಗಿ ಪರಿಹಾರ ಕಾರ್ಯಗಳಲ್ಲಿ ಭಾಗವಹಿಸ ಬೇಕೆಂದು ಮನಸ್ಸು ತುಡಿಯುತ್ತಿದ್ದರೂ ನನ್ನ ದುರಾದೃಷ್ಟಕ್ಕೆ ಅದು ಸಾಧ್ಯವಾಗುತ್ತಿಲ್ಲ. ನಾನು ಆಡಳಿತ ಪಕ್ಷದಲ್ಲೇ ಇರಲಿ, ವಿರೋಧ ಪಕ್ಷದಲ್ಲೇ ಇರಲಿ. ಜನರ ಸಂಕಷ್ಟಕ್ಕೆ ನೆರವಾಗುವುದು ಆದ್ಯ ಕರ್ತವ್ಯವೆಂದು ನಂಬಿ ರಾಜಕಾರಣ ಮಾಡುತ್ತಾ ಬಂದವನು. ಈ ಕಾರಣಕ್ಕಾಗಿಯೇ ನನ್ನ ಬದಲು ನನ್ನ ಮಗ, ವರುಣಾ ಕ್ಷೇತ್ರದ ಶಾಸಕರಾದ ಯತೀಂದ್ರ ಅವರನ್ನು ಪ್ರವಾಹ ಸಂತ್ರಸ್ತರಿಗೆ ನೆರವಾಗುವಂತ ಕಳುಹಿಸಿದ್ದೇನೆ’ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ದೆಹಲಿ ಭೇಟಿ ಸಾಧ್ಯತೆ?: ವಿಶ್ರಾಂತಿ ಯಲ್ಲಿರುವ ಸಿದ್ದರಾಮಯ್ಯ ಅವರು ಶನಿವಾರ ದೆಹಲಿಗೆ ತೆರಳಲಿದ್ದಾರೆ. ಕಾಂಗ್ರೆಸ್‌ ಕಾರ್ಯಕಾರಿ ಸಭೆ ಹಾಗೂ ಎಲ್ಲ ರಾಜ್ಯಗಳ ಶಾಸಕಾಂಗ ಪಕ್ಷದ ನಾಯಕರ ಸಭೆ ಕರೆದಿದ್ದು, ಅದರಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಈ ಮಧ್ಯೆ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು, ಶನಿವಾರ ಹುಬ್ಬಳ್ಳಿಗೆ ತೆರಳಲಿದ್ದು, ಹುಬ್ಬಳ್ಳಿ-ಧಾರವಾಡ ಸೇರಿ ಉತ್ತರ ಕರ್ನಾಟಕ ಭಾಗದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next