ಬೆಂಗಳೂರು: ರಾಜ್ಯ ರಾಜಕೀಯದ ಹಠಾತ್ ಬೆಳವಣಿಗೆಯಲ್ಲಿ ಕಾಂಗ್ರೆಸ್‌ನ ಆನಂದ್‌ಸಿಂಗ್ ಮತ್ತು ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸಮ್ಮಿಶ್ರ ಸರಕಾರಕ್ಕೆ ಶಾಕ್ ನೀಡಿದ ಬೆನ್ನಲ್ಲೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ದೂರವಾಣಿ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ.
ಮೂಲಗಳಪ್ರಕಾರ ಇಬ್ಬರು ನಾಯಕರ ರಾಜಕೀಯ ಬೆಳವಣಿಗೆಯ ಬಗ್ಗೆ ಚರ್ಚಿಸಿದ್ದು, ಆದಷ್ಟು ಬೇಗ ಬೆಂಗಳೂರಿಗೆ ವಾಪಾಸಾಗಿ ಇನ್ನಷ್ಟು ಶಾಸಕರ ರಾಜೀನಮೆ ನೀಡದಂತೆ ತಡೆಯಿರಿ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಅಮೇರಿಕದ ನ್ಯೂ ಜೆರ್ಸಿಯಲ್ಲಿ ಕಾಲಭೈರವೇಶ್ವರ ದೇವಸ್ಥಾನದ ಭೂಮಿ ಪೂಜೆ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆದಿದೆ. ರಾಜ್ಯದ ಎಲ್ಲ ವಿದ್ಯಮಾನಗಳನ್ನು ಇಲ್ಲಿಂದಲೇ ಗಮನಿಸುತ್ತಿದ್ದೇನೆ. ರಾಜ್ಯದಲ್ಲಿ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನ ‘ನಿರಂತರ ಹಗಲುಗನಸು ಎಂದು ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದರು.
ಅಸಮಾಧಾನ ಹೊಂದಿರುವ ಶಾಸಕರು ಪಕ್ಷ ತೊರೆಯದಂತೆ ಕಾಂಗ್ರೆಸ್ ಪಾಳಯದಲ್ಲಿ ಕಸರತ್ತು ಆರಂಭವಾಗಿದೆ. ಅತೃಪ್ತ ಶಾಸಕರ ಮನವೊಲಿಸಲ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್, ಡಿಸಿಎಂ ಡಾ.ಜಿ.ಪರಮೇಶ್ವರ್,ಸಿದ್ದರಾಮಯ್ಯ ಅವರು ಪ್ರಯತ್ನ ಮುಂದುವರಿಸಿದ್ದಾರೆ.