Advertisement

ಸಿಎಎ ಹೋರಾಟಕ್ಕೆ ಪಿಎಫ್ ಐ ನಿಂದ ಅಕ್ರಮ ಹಣ ಬಂದಿದ್ದಲ್ಲಿ ಕ್ರಮ ಕೈಗೊಳ್ಳಲಿ: ಸಿದ್ದರಾಮಯ್ಯ

09:58 AM Jan 29, 2020 | keerthan |

ಹುಬ್ಬಳ್ಳಿ: ಸಿಎಎ ಹೋರಾಟಕ್ಕೆ ಪಿಎಫ್ ಐ ಹಣ ಹರಿದು ಬಂದಿರುವ ಆರೋಪ ವಿಚಾರ ಬಗ್ಗೆ ಸಮಗ್ರ ತನಿಖೆ ಆಗಲಿ. ಯಾರದೇ ಅಕ್ರಮ ಹಣ ಬಂದಿದ್ದಲ್ಲಿ ಅವರ ಮೇಲೆ ಕ್ರಮ ತೆಗೆದುಕೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು.

Advertisement

ಬಿಜೆಪಿ ರಾಷ್ಟ್ರೀಯ ನಾಯಕರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಚಿವ ಸಂಪುಟ ವಿಸ್ತರಣೆಗೆ ಅನುಮತಿ ನೀಡುತ್ತಿಲ್ಲ  ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಎಂಬುದೇ ಇಲ್ಲ. ರಾಷ್ಟ್ರೀಯ ನಾಯಕರು ಸಿಎಂ ಗೆ  ಸ್ವಾತಂತ್ರ್ಯ  ಕೊಡುತ್ತಿಲ್ಲ. ಹೀಗಾಗಿ ಯಡಿಯೂರಪ್ಪ ಅವರು ಸಂಕಷ್ಟದಲ್ಲಿ ಸಿಲುಕಿ ಕೊಂಡಿದ್ದಾರೆ. ವಿಲವಿಲ ಒದ್ದಾಡುತ್ತಿದ್ದಾರೆ ಎಂದರು.

ಕೇಂದ್ರದಿಂದ ರಾಜ್ಯಕ್ಕೆ ಯಾವುದೇ ಹಣ ಬಿಡುಗಡೆ ಮಾಡುತ್ತಿಲ್ಲ. ರಾಜ್ಯದಲ್ಲಿ ಯಾವುದೇ ಅಭಿವೃದ್ದಿ ಆಗುತ್ತಿಲ್ಲ. ಕೇಂದ್ರ ರಾಜ್ಯದ ಪಾಲಿನ ಹಣ ಬಿಡುಗಡೆ ಮಾಡುತ್ತಿಲ್ಲ ಎಂದ ಅವರು ಸಿಎಎ ಸಂವಿಧಾನಕ್ಕೆ ವಿರುದ್ಧವಾದ ಕಾಯ್ದೆ. ಜಾತಿ ಧರ್ಮದ ಆಧಾರದ ಮೇಲೆ ಈ ಕಾಯ್ದೆ ಜಾರಿ ಮಾಡಿದ್ದಾರೆ. ಈ ಕಾಯ್ದೆ ಬಗ್ಗೆ ಕಾಂಗ್ರೆಸ್ ಸಂಪೂರ್ಣ ವಿರೋಧಿಸುತ್ತದೆ ಎಂದರು.

ನನ್ನ ವಕೀಲ ವೃತ್ತಿ ಸನ್ನದ್ಧು ರದ್ದಾಗಿತ್ತು. ಅದನ್ನು ನವೀಕರಿಸಲು ಅರ್ಜಿ ಸಲ್ಲಿಸಿದ್ದೇನೆ. 40 ವರ್ಷಗಳ ನಂತರ ಆ ವೃತ್ತಿ ಮಾಡಲು ಸಾಧ್ಯವೇ ? ಎಂದು ಪ್ರಶ್ನಿಸಿದರಲ್ಲದೆ, ಕೆಪಿಸಿಸಿಗೆ ಶೀಘ್ರವೇ ಅಧ್ಯಕ್ಷರ ಆಯ್ಕೆ ಮಾಡಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next