Advertisement

ಸಚಿವರು ಸತ್ಯವಂತರಾದರೆ ತನಿಖೆ ಬೇಡ ಎನ್ನುವುದೇಕೆ? ಇದು ಭಂಡತನದ ಪರಮಾವಧಿ: ಸಿದ್ದರಾಮಯ್ಯ

04:30 PM Jul 24, 2020 | keerthan |

ಬೆಂಗಳೂರು: ವೈದ್ಯಕೀಯ ಉಪಕರಣಗಳ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರಕ್ಕೆ ಭಯವೇಕೆ? ಸಚಿವರುಗಳು ಸತ್ಯವಂತರು ಏನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ? ಇದು ಭಂಡತನದ ಪರಮಾವಧಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Advertisement

ತಮ್ಮ ನಿವಾಸದಲ್ಲಿಂದು ತಮ್ಮನ್ನು ಭೇಟಿಯಾಗಿದ್ದ ಮಾಧ್ಯಮ ಪ್ರತಿನಿಧಿಗಳ ಜೊತೆ ಸಿದ್ದರಾಮಯ್ಯ ಅವರು ಮಾತನಾಡಿದರು.

ಜನರಿಗೆ ಸತ್ಯಾಸತ್ಯತೆ ಗೊತ್ತಾಗಬೇಕು ಎಂದರೆ ನ್ಯಾಯಾಂಗ ತನಿಖೆಯಾಗಲಿ. ಅದಕ್ಕೆ ಭಯವೇಕೆ? ಸತ್ಯ ಹೊರ ಬಂದರೆ ಜನರೇ ತೀರ್ಮಾನ ಮಾಡುತ್ತಾರೆ. ನಮ್ಮ ಮತ್ತು ಅವರ ದಾಖಲೆಗಳು ನ್ಯಾಯಾಂಗ ತನಿಖೆಯ ಮುಂದೆ ಬರಲಿ ಎಂದು ಆಗ್ರಹಿಸಿದರು.

ನಾವು ಸುಳ್ಳು ಹೇಳುತ್ತೇವೆ, ಅವವರೇ ಸತ್ಯವಂತರು ಎನ್ನುವುದಾದರೆ ತನಿಖೆ ಬೇಡ ಎನ್ನುವುದೇಕೆ? ಅಂದು ಭಂಡತನ ಅಲ್ಲವೇ? ಹೀಗಾಗಿ ಹೈಕೋರ್ಟ್‍ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆಯಾಗಲಿ ಎಂದು ಮತ್ತೆ ಒತ್ತಾಯಿಸುತ್ತೇನೆ. ತನಿಖೆಗೆ ಸರ್ಕಾರ ಆದೇಶ ಮಾಡುವುದಿಲ್ಲ ಎಂದಾದರೆ ಅವರು ಕಳ್ಳತನ ಮಾಡಿದ್ದಾರೆ ಎಂದು ಅರ್ಥ ಎಂದು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ನಿನ್ನೆ ನಾವು ಕೊಟ್ಟಿರುವುದೂ ನಾವು ಕೊಟ್ಟಿರುವುದೂ ಸರ್ಕಾರಿ ದಾಖಲೆಗಳೇ. ಅದು ಸುಳ್ಳು ಎನ್ನುವುದಾದರೆ ನಿನ್ನೆ ಸರ್ಕಾರದ ಪರವಾಗಿ ಪತ್ರಿಕಾಗೋಷ್ಠಿ ನಡೆಸಿದವರೂ ಮಂತ್ರಿಗಳಾಗಿರುವುದೇ ಸುಳ್ಳಾ? ಸರ್ಕಾರದಲ್ಲಿ ಇರುವ ದಾಖಲೆಗಳೇ ಸುಳ್ಳಾ ಎಂದು ಪ್ರಶ್ನಿಸಿದರು.

Advertisement

ನಾವು ಕೊಟ್ಟಿರುವ ದಾಖಲೆಗಳನ್ನು ನಾನು ಸೃಷ್ಟಿ ಮಾಡಿದ್ದಲ್ಲ. ಕೇಂದ್ರ ಸರ್ಕಾರ ಪಿಎಂಒ ಕಚೇರಿಯಿಂದ ಹೊರಡಿಸಿರುವ ಪ್ರಕಟಣೆಯಲಿ 50 ಸಾವಿರ ವೆಂಟಿಲೇಟರ್‍ ಗಳನ್ನು ತಲಾ ನಾಲ್ಕು ಲಕ್ಷ ರೂ. ವೆಚ್ಚದಲ್ಲಿ ಖರೀದಿಸಲಾಗಿದೆ. ಇದಕ್ಕಾಗಿ ಎರಡು ಸಾವಿರ ಕೋಟಿ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದೆ.

ಕೇಂದ್ರ ಸರ್ಕಾರ ಹೇಳಿರುವುದು ಸುಳ್ಳು. ಅದು ಸುಳ್ಳು. ನಮಗೆ ಕೊಟ್ಟಿರುವ ವೆಂಟಿಲೇಟರ್‍ಗಳೂ ಕಳಪೆ ಎಂದು ಮಂತ್ರಿಗಳು ಹೇಳಲಿ. ಗುಣಮಟ್ಟದ ವಿಚಾರಕ್ಕೆ ಬರುವುದಾದರೆ ಕಾರುಗಳಲ್ಲಿ ಐಷಾರಾಮಿಯೂ ಇರುತ್ತದೆ. ಸಾಮಾನ್ಯದ್ದೂ ಇರುತ್ತದೆ. ಕೇಂದ್ರ ಸರ್ಕಾರ ಸಹ 18 ಲಕ್ಷ ರೂ. ವೆಚ್ಚದಲ್ಲಿಯೇ ವೆಂಟಿಲೇಟರ್ ಖರೀದಿ ಮಾಡಬುದಿತ್ತು. ಕೇಂದ್ರ ಸಕಾರ 4 ಲಕ್ಷ ರೂ. ವೆಚ್ಚದಲ್ಲಿ ಖರೀದಿ ಮಾಡಿವುದು ಸುಳ್ಳೇ? ಇದಕ್ಕೆ ಮಂತ್ರಿಗಳು ನೀಡುವ ಉತ್ತರ ಏನು ಎಂದು ಪ್ರಶ್ನಿಸಿದರು.

ಕಾರ್ಮಿಕ ಇಲಾಖೆಯಲ್ಲಿ ಒಂದು ಸಾವಿರ ಕೋಟಿ ರೂ.ಗಳ ಅವ್ಯವಹಾರ ಆಗಿದೆ ಎಂದು ಹೇಳಿಲ್ಲ. ಅಷ್ಟು ಖರ್ಚಾಗಿದೆ ಎಂದಿದ್ದೇನೆ. ಆದರೆ ಫುಡ್ ಪ್ಯಾಕೇಟ್ ಕೊಡುವಲ್ಲಿ ಅವ್ಯವಹಾರ ಆಗಿದೆ. ಒಂದು ಸಾವಿರ ಕೋಟಿ ಖರ್ಚಾಗಿದೆ ಅದಕ್ಕೆ ಲೆಕ್ಕ ಕೊಡಿ ಅಂದೆ. ಇವರು 324 ಕೋಟಿ ಮಾತ್ರ ಖರ್ಚು ಆಗಿದೆ. ಎನ್ನುತ್ತಾರೆ. ಆದರೆ ನಿನ್ನೆ ಮಂತ್ರಿಗಳೇ 2118 ಕೋಟಿ ರೂ. ವೆಚ್ಚ ಎಂದಿದ್ದು ಏಕೆ. ಅವರೇ ಸುಳ್ಳು ಲೆಕ್ಕ ಕೊಡುತ್ತಿದ್ದಾರೆ ಎಂಬುದು ಇದರ ಅರ್ಥ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next