Advertisement

ಪಕ್ಷ ಬಿಟ್ಟವರ ಮರು ಸೇರ್ಪಡೆ ಬಗ್ಗೆ ಡಿಕೆಶಿ ಜೊತೆ ಮಾತನಾಡುತ್ತೇನೆ: ಸಿದ್ದರಾಮಯ್ಯ

03:54 PM Jul 03, 2021 | Team Udayavani |

ಬೆಂಗಳೂರು: ಪಕ್ಷ ಬಿಟ್ಟು ಹೋದ 14 ಶಾಸಕರು ಮಾತ್ರವಲ್ಲ ಯಾರು ಬೇಕಾದರೂ ಕಾಂಗ್ರೆಸ್ ಸೇರಲು ಅರ್ಜಿ ಹಾಕಿಕೊಳ್ಳಬಹುದು ಎಂದು ಕೆಪಿಸಿಸಿ ಅಧ್ಯಕ್ಷರು ಹೇಳಿದ್ದಾರೆ. ಪಕ್ಷ ಬಿಟ್ಟು ಹೋದ 14 ಮಂದಿಯನ್ನೂ ಸೇರಿಸಿಕೊಳ್ಳುವುದಾಗಿ ಯಾರೂ ಹೇಳಿಲ್ಲ. ಈ ಕುರಿತು ನಾನು ಅಧ್ಯಕ್ಷರ ಜೊತೆ ಮಾತನಾಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Advertisement

ಪ್ರಳಯವಾದರೂ 14 ಮಂದಿಯನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ನಾನು ವಿಧಾನಸಭೆಯಲ್ಲಿ ಹೇಳಿದ್ದು ನಿಜ ಎಂದು ತಿಳಿಸಿದರು.

ತಮ್ಮ ವಿರುದ್ಧ ಯಾವುದೇ ವಿಡಿಯೋ ಪ್ರಸಾರ ಮಾಡದಂತೆ ಕೇಂದ್ರ ಸಚಿವ ಸದಾನಂದಗೌಡ ಅವರು ನ್ಯಾಯಾಲಯದಿಂದ ತಡೆ ಆದೇಶ ತಂದಿದ್ದಾರೆ. ಕಳ್ಳನ ಮನಸ್ಸು ಹುಳ್ಳಗೆ ಎಂಬಂತೆ ಆಗಿದೆ ಅವರ ಸ್ಥಿತಿ. ಕುಂಬಳ ಕಾಯಿ ಕಳ್ಳ ಎಂದರೆ ಅವರು ಹೆಗಲು ಮುಟ್ಟಿ ನೋಡಿಕೊಳ್ಳುವುದೇಕೆ ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಇದನ್ನೂ ಓದಿ:ಬಿಜೆಪಿ ಆಡಳಿತದಲ್ಲಿ ಕಾನೂನು ಎಂಬುದು ಪುಸ್ತಕದ ಬದನೆಕಾಯಿಯಾಗಿದೆ: ಕಾಂಗ್ರೆಸ್

ಕೋವಿಡ್ ಲಸಿಕೆಯ ಎರಡನೇ ಡೋಸ್‍ಗಾಗಿ ರಾಜ್ಯದಲ್ಲಿ ಜನ ಪರದಾಡುತ್ತಿದ್ದಾರೆ. ಲಸಿಕೆ ನೀಡುವ ಕಾರ್ಯವನ್ನು ಸಮರ್ಪಕವಾಗಿ ನಡೆಸುವಲ್ಲಿ ಈ ಸರ್ಕಾರ ವಿಫಲವಾಗಿದೆ. 18 ವರ್ಷ ಮೀರಿದವರಿಗೆ ಲಸಿಕೆ ನೀಡುವುದಾಗಿ ಸರ್ಕಾರ ಹೇಳಿತ್ತು. ಆದರೆ, ಎಲ್ಲಿಯೂ ಲಸಿಕೆ ಸಿಗುತ್ತಿಲ್ಲ. ಲಸಿಕೆ ದಾಸ್ತಾನಿಲ್ಲ ಎಂದು ಬಿಬಿಎಂಪಿ ಆಯುಕ್ತರೇ ಹೇಳಿದ್ದಾರೆ. ಆರೋಗ್ಯ ಸಚಿವರು ಮಾತ್ರ ನಮ್ಮಲ್ಲಿ ಸಮಸ್ಯೆಯೇ ಇಲ್ಲ ಎನ್ನುತ್ತಿದ್ದಾರೆ. ಲಸಿಕೆ ಪೂರೈಕೆ ಮಾಡುವಂತೆ ಕೇಂದ್ರದ ಮೇಲೆ ಒತ್ತಡ ಹೇರುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿಲ್ಲ ಎಂದರು

Advertisement
Advertisement

Udayavani is now on Telegram. Click here to join our channel and stay updated with the latest news.

Next