Advertisement

ಧಮ್ ಇದ್ದರೆ ಪ್ರಧಾನಿ ಮೋದಿ ಮುಂದೆ ಕೂತು ರಾಜ್ಯಕ್ಕೆ ಪರಿಹಾರ ತರಲಿ:  ಸಿದ್ದರಾಮಯ್ಯ ಸವಾಲು

02:03 PM Oct 25, 2020 | Suhan S |

ಕಲಬುರಗಿ: ಡಿಸಿಎಂ ಅಶ್ವತ್ ನಾರಾಯಣಗೆ ಹತ್ತು ಪಟ್ಟು ಧಮ್ ಇರಲಿ. ಅವರಿಗೆ ಧಮ್ ಇದ್ದರೆ ಪ್ರಧಾನಿ ಮೋದಿ ಮುಂದೆ ಕೂತು ರಾಜ್ಯಕ್ಕೆ ಬರಬೇಕಾದ ಪರಿಹಾರ ತಗೆದುಕೊಂಡು ಬರಲಿ‌ ಎಂದು ‌ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದರು.

Advertisement

ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ಸ್ಥಳಕ್ಕೆ ವೀಕ್ಷಣೆ ನಿಟ್ಟಿನಲ್ಲಿ ಆಗಮಿಸಿದ ಅವರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಅಶ್ವತ್ ನಾರಾಯಣಗೆ ನನ್ನಗಿಂತ ಹೆಚ್ಚು ಧಮ್ ಇದೆ ಅಂತಾರೆ. ರಾಜ್ಯದಲ್ಲಿ 25 ಸಂಸದರು ಇದ್ದರೂ ಪ್ರಯೋಜನವಿಲ್ಲ. ಧಮ್ ಇದ್ದರೆ ಕೇಂದ್ರದಿಂದ ರಾಜ್ಯಕ್ಕೆ ಪರಿಹಾರ ತಗೆದುಕೊಂಡು ಬರಲಿ‌ ಎಂದು ತೀರುಗೇಟು ನೀಡಿದರು.

ನೆರೆ ಸಂತ್ರಸ್ಥರಿಗೆ ಇನ್ನೂ ನಯಾ ಪೈಸೆ ಹಣ ನೀಡಿಲ್ಲ. ‌ಸಿಎಂ ಯಡಿಯೂರಪ್ಪ ವೈಮಾನಿಕ ಸಮೀಕ್ಷೆಯಿಂದ ಯಾವುದೇ ಪ್ರಯೋಜನ ಇಲ್ಲ. ಅವರು ಜನರ ಜೊತೆ ಮಾತನಾಡಿಲ್ಲ. ನೆರೆ ಪೀಡಿತ ಪ್ರದೇಶಗಳಿಗೆ ಹೋಗಿಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ‌ನಡೆಸಿದರು.

ಬಿಜೆಪಿ ಸರ್ಕಾರ ಜನವಿರೋಧಿ ಸರ್ಕಾರ.‌ ಯಡಿಯೂರಪ್ಪ ಚೆಕ್ ಮೂಲಕ ಲಂಚ ಪಡೆಯುತ್ತಿದ್ದರು. ಇದೀಗ ಅವರ ಮಗ ಆರ್ ಟಿ ಜಿ ಎಸ್ ಮೂಲಕ ಲಂಚ ಪಡೆಯುತ್ತಿದ್ದಾರೆ. ಇಂತಹ ಭ್ರಷ್ಟ ಸರ್ಕಾರವನ್ನು ನಾನು ನನ್ನ ರಾಜಕೀಯ ಜೀವನದಲ್ಲಿ ನೋಡಿಲ್ಲ ಎಂದು ಸಿದ್ದರಾಮಯ್ಯ ಟೀಕಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next