ಬೆಂಗಳೂರು: ದೆಹಲಿಯಿಂದ ಶ್ರೀನಗರಕ್ಕೆ ತೆರಳಬೇಕಿದ್ದ ಎಲ್ಲ ವಿಮಾನಗಳ ಹಾರಾಟ ರದ್ದಾಗಿರುವ ಹಿನ್ನೆಲೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ರದ್ದಾಗಿದೆ.
ಬೆಳಗ್ಗೆ 09.15ರ ವಿಮಾನದಲ್ಲಿ ಸಿದ್ದರಾಮಯ್ಯ ಅವರು ಶ್ರೀನಗರಕ್ಕೆ ಪ್ರಯಾಣ ಬೆಳೆಸಬೇಕಿತ್ತು. ಇದಕ್ಕಾಗಿ ಅವರು ನಿನ್ನೆ ರಾತ್ರಿ ದೆಹಲಿಗೆ ಆಗಮಿಸಿದ್ದರು.
ಇದನ್ನೂ ಓದಿ: ಹೈದರಾಬಾದ್: ಖ್ಯಾತ ಕವಿ, ವಿಮರ್ಶಕ, ಕತೆಗಾರ ಕೆ.ವಿ.ತಿರುಮಲೇಶ್ ವಿಧಿವಶ
ಬೆಳಗ್ಗೆ 8 ಗಂಟೆಗೆ ದೆಹಲಿ ವಿಮಾನ ನಿಲ್ದಾಣಕ್ಜೆ ಸಿದ್ದರಾಮಯ್ಯ ಅವರು ಆಗಮಿಸಿದ್ದರು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಮಾಜಿ ಸಚಿವ ವಿನಯ್ ಕುಲಕರ್ಣಿ, ಶಾಸಕರಾದ ನಾಗೇಂದ್ರ, ರಾಘವೇಂದ್ರ ಹಿಟ್ನಾಳ್, ಪ್ರಕಾಶ್ ರಾಥೋಡ್, ಮಾಜಿ ಶಾಸಕರಾದ ಅಶೋಕ್ ಪಟ್ಟಣ, ಐವಾನ್ ಡಿಸೋಜಾ ಜೊತೆಗಿದ್ದರು.
Related Articles
ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಸಿದ್ದರಾಮಯ್ಯ ಅವರು ಶ್ರೀನಗರಕ್ಕೆ ಪ್ರಯಾಣ ಬೆಳೆಸಬೇಕಿತ್ತು.
ಶ್ರೀನಗರದಲ್ಲಿ ಹವಾಮಾನ ವೈಪರೀತ್ಯ ಉಂಟಾಗಿರುವ ಹಿನ್ನೆಲೆಯಲ್ಲಿ ದೆಹಲಿ, ಶ್ರೀನಗರ ನಡುವಣ ಎಲ್ಲ ವಿಮಾನಗಳ ಹಾರಾಟ ರದ್ದಾಗಿದೆ.