Advertisement

ತೋಟದ ಮನೆಯಲ್ಲಿ ಸಿದ್ದರಾಮಯ್ಯ ವಾಸ್ತವ್ಯ

05:56 AM Jul 08, 2020 | Lakshmi GovindaRaj |

ಮೈಸೂರು: ಬೆಂಗಳೂರಿನಲ್ಲಿ ಕೋವಿಡ್‌ 19 ಸೋಂಕು ದಿನದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ  ಟಿ.ಕಾಟೂರು ಗ್ರಾಮದಲ್ಲಿರುವ ತೋಟದ ಮನೆಯಲ್ಲಿ ವಾಸ್ತವ್ಯ ಹೂಡಿದ್ದಾರೆ.  ಇತ್ತೀಚೆಗೆ ಹೃದಯ ಸಂಬಂಧ ಚಿಕಿತ್ಸೆಗೆ ಒಳಗಾಗಿದ್ದ ಅವರು, ಮುಂಜಾಗ್ರತೆ ಹಾಗೂ ಸಾರ್ವಜನಿಕ ಸಂಪರ್ಕದಿಂದ ದೂರ ಇರುವಂತೆ ಕುಟುಂಬದ ವೈದ್ಯರೂ ಆಗಿರುವ ಸಿದ್ದರಾಮಯ್ಯ ಪುತ್ರ ಶಾಸಕ ಯತೀಂದ್ರ ತಂದೆಗೆ ಸಲಹೆ  ನೀಡಿದ್ದಾರೆ.

Advertisement

ಈ ಹಿನ್ನೆಲೆಯಲ್ಲಿ ಆರೋಗ್ಯದ ಹಿತದೃಷ್ಟಿಯಿಂದ ತೋಟದ ಮನೆಯಲ್ಲಿ ಉಳಿದುಕೊಂಡಿದ್ದಾರೆ. ಸದ್ಯಕ್ಕೆ ಮೈಸೂರಿನಲ್ಲಿರುವ ಸಿದ್ದರಾಮಯ್ಯ ರಾಜಕೀಯ ಮತ್ತು ಸಾರ್ವಜನಿಕರಿಂದ ದೂರ ಉಳಿಯದೇ, ಕೋವಿಡ್‌-19  ಪ್ರಕರಣ, ಈ ಬಗ್ಗೆ ಸರ್ಕಾರ ಮತ್ತು ಆಡಳಿತ ವ್ಯವಸ್ಥೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಅಲ್ಲದೇ, ಸಾಮಾಜಿಕ ಮಾಧ್ಯಮ ತಂಡದೊಂದಿಗೆ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.

ಸಿದ್ದರಾಮಯ್ಯರ ಆತ್ಮೀಯರಾದ ಮಾಜಿ ಸಚಿವ  ಎಚ್‌.ಸಿ.ಮಹದೇವಪ್ಪ, ಮಾಜಿ ಶಾಸಕ ಕೆ.ವೆಂಕಟೇಶ್‌, ಶಾಸಕ  ಎಚ್‌.ಪಿ.ಮಂಜುನಾಥ್‌, ಶಿವಾಜಿನಗರ ಶಾಸಕ ರಿಜ್ವಾನ್‌ ಹರ್ಷಾದ್‌ ಇತರರು ಅವರನ್ನು ಭೇಟಿಯಾಗಿ ರಾಜಕೀಯ ಸಂಬಂಧ ಚರ್ಚಿಸಿದ್ದಾರೆ.

ಹೋಂ ಕ್ವಾರಂಟೈನಲ್ಲಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ ಹೋಂ ಕ್ವಾರಂಟೈನ್‌ನಲ್ಲಿ ಇಲ್ಲ, ಅವರು ಆರೋಗ್ಯವಾಗಿದ್ದಾರೆ. ವಿಶ್ರಾಂತಿ ಪಡೆಯುತ್ತಿದ್ದಾರಷ್ಟೆ. ಡಾ.ಯತೀಂದ್ರ ಅವರು ಸ್ವಯಂ ಕ್ವಾರಂಟೈನ್‌ನಲ್ಲಿದ್ದು, ಅವರ ಕೋವಿಡ್‌  ಪರೀಕ್ಷೆ ವರದಿಯೂ ನೆಗೆಟಿವ್‌ ಬಂದಿದೆ ಎಂದು ಸಿದ್ದರಾಮಯ್ಯ ಅವರ ಕಾರ್ಯದರ್ಶಿ ರಾಮಯ್ಯ ಸ್ಪಷ್ಟಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next