Advertisement
ಈ ಕುರಿತು ಹೇಳಿಕೆ ನೀಡಿರುವ ಅವರು, ಅಗತ್ಯ ವಸ್ತುಗಳ ಬೆಲೆಯನ್ನು ಶೇ. 20-30ರಷ್ಟು ಏರಿಕೆ ಮಾಡಿದರೆ ಈಗಾಗಲೇ ಕಷ್ಟದಲ್ಲಿರುವ ಬಡವರಿಗೆ ಇನ್ನಷ್ಟು ತೊಂದರೆಯಾಗುತ್ತದೆ. ಅಕ್ಕಿ, ಬೇಳೆ ಬೆಲೆ ಹೆಚ್ಚಾದರೆ ಖರೀದಿ ಮಾಡುವುದಾದರೂ ಹೇಗೆ? ಈಗಲೇ ಅವರಿಗೆ ದುಡಿಮೆ ಇಲ್ಲ, ಹಣವೂ ಇಲ್ಲ. ಈ ಕುರಿತು ಗಮನ ಹರಿಸಿ, ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಯವರು ಆಹಾರ ಇಲಾಖೆ ಅಧಿಕಾರಿಗಳಿಗೆ ಆದೇಶ ನೀಡಬೇಕು ಎಂದಿದ್ದಾರೆ.
Related Articles
Advertisement
ಸರ್ಕಾರಿ ನೌಕರರ ವೇತನ ಕಡಿತ ಬೇಡ
ಸಕಾರಿ ನೌಕರರ ವೇತನ ನಿಲ್ಲಿಸುವ ಅಥವಾ ಕಡಿತ ಮಾಡುವ ನಿರ್ಧಾರ ಸರಿಯಲ್ಲ. ಈಗಾಗಲೇ ಅವರು ಒಂದು ದಿನದ ವೇತನವನ್ನು ದೇಣಿಯಾಗಿ ನೀಡಿದ್ದಾಗೆ. ಅದು ಸಾಕು ಎಂಬುದು ನನ್ನ ಭಾವನೆ. ಬೇಕಾದರೆ ಸಂಸದರು, ಶಾಸಕರ ವೇತನವನ್ನು ಇನ್ನಷ್ಟು ವೇತನ ಕಡಿತ ಮಾಡಲಿ. ಅದಕ್ಕೆ ನಮ್ಮ ವಿರೋಧ ಇಲ್ಲ ಎಂದಿದ್ದಾರೆ.
ಲಾಕ್‍ಡೌನ್ ಮುಂದುವರಿದರೆ ಸಹಕಾರ
ಒಂದು ವೇಳೆ ಲಾಕ್‍ಡೌನ್ ಮುಂದುವರಿಸುವ ಅನಿವಾರ್ಹ ಪರಿಸ್ಥಿತಿ ಎದುರಾದರೆ ರಾಜ್ಯದ ಜನತೆ ಅದಕ್ಕೆ ಸಹಕಾರ ನೀಡಬೇಕು. ನಾವೂ ಸಹಕಾರ ನೀಡುತ್ತೇವೆ. ಅಗತ್ಯ ವಸ್ತುಗಳನ್ನು ಖರೀದಿ ಮಾಡುವುದು ಹಾಗೂ ಮಾರಾಟ ಮಾಡುವುದನ್ನು ಹೊರತುಪಡಿಸಿ ಲಾಕ್ ಡೌನ್ ಬಿಗಿ ಮಾಡಬೇಕು ಎಂದು ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.