ಬೆಂಗಳೂರು : ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆಗೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನ ಮಾಡಿದ ಹಿನ್ನಲೆಯಲ್ಲಿ ಬಿಜೆಪಿ ಕಾದು ನೋಡುವ ತಂತ್ರಕ್ಕೆ ಶರಣಾಗಿದೆ.
ಇಂದು ಮಂಗಳವಾರ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಇದೇ ವಿಚಾರದಲ್ಲಿ ಮುಂದೆ ಕೈಗೊಳ್ಳಬೇಕಾದ ತೀರ್ಮಾನಗಳ ಕುರಿತು ಮಹತ್ವದ ಚರ್ಚೆ ನಡೆಸಲಾಯಿತು.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೆ ಕರೆ ಮಾಡಿ ಮಾತುಕತೆ ನಡೆಸಿರುವುದಾಗಿ ತಿಳಿದು ಬಂದಿದೆ.
ಬುದ್ಧಿವಂತಿಕೆಯ ತೀರ್ಮಾನ !
ಮಹತ್ವದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ‘ಭಾರತೀಯ ಜನತಾ ಪಾರ್ಟಿ ಇದುವರೆಗೂ ಅಖಿಲ ಭಾರತ ವೀರಶೈವ ಮಹಾಸಭಾ ಕೈಗೊಂಡಿದ್ದ ನಿರ್ಧಾರಗಳಿಗೆ ಪೂರ್ಣ ಸಹಕಾರ ನೀಡುತ್ತಾ ಬಂದಿದೆ. ಈಗ ರಾಜ್ಯ ಸರ್ಕಾರದ ತೀರ್ಮಾನದ ಹಿನ್ನಲೆಯಲ್ಲಿ ಯಾವುದೇ ಅವಸರದ ಹೇಳಿಕೆ ಕೊಡುವುದಿಲ್ಲ’ಎಂದರು.
‘ಸಿದ್ದರಾಮಯ್ಯ ಬುದ್ಧಿವಂತಿಕೆಯಿಂದ ತೀರ್ಮಾನಕ್ಕೆ ಬಂದಿದ್ದಾರೆ’ ಎಂದ ಬಿಎಸ್‌ವೈ ‘ವೀರಶೈವ ಮಹಾಸಭಾದವರು ಏನು ತೀರ್ಮಾನ ತೆಗದುಕೊಳ್ಳುತ್ತಾರೆ ಎನ್ನುವುದನ್ನು ತಿಳಿದು ನಂತರ ನಮ್ಮ ನಿಲುವು ಏನೆಂದು ಬಹಿರಂಗಪಡಿಸುತ್ತೇವೆ’ಎಂದರು.