Advertisement
ರಾಜ್ಯದಲ್ಲಿನ ಮೆಡಿಕಲ್ ಆಕ್ಸಿಜನ್ ಅಭಾವದ ಬಗ್ಗೆ ಸರಣಿ ಟ್ವಿಟ್ ಮಾಡಿರುವ ಸಿದ್ದರಾಮಯ್ಯ, ಕೇರಳದಲ್ಲಿ ಅಗತ್ಯಕ್ಕೆ ಅನುಗುಣವಾಗಿ ಆಕ್ಸಿಜನ್ ಉತ್ಪಾದನೆ ಮಾಡಿಕೊಳ್ಳುತ್ತಾರೆ. ನಮ್ಮಲ್ಲಿ ಏಕೆ ಹೀಗಿಲ್ಲ? ತಜ್ಞರ ವರದಿ ಪ್ರಕಾರ ಮೇ ತಿಂಗಳಲ್ಲಿ ಕೊರೊನಾ ಸೋಂಕು ಇನ್ನೂ ಹೆಚ್ಚಾಗುತ್ತದೆ. ಆದ್ದರಿಂದ ಎಲ್ಲ ಜಿಲ್ಲೆಗಳಲ್ಲಿ ಆಕ್ಸಿಜನ್ ತಯಾರಿಸಲು ರಾಜ್ಯ ಬಿಜೆಪಿ ಸರ್ಕಾರ ಅವಕಾಶ ಮಾಡಿಕೊಡಬೇಕು ಎಂದಿದ್ದಾರೆ.
Related Articles
Advertisement
ಸಂಸದ ತೇಜಸ್ವಿ ಸೂರ್ಯ ಅವರು ಬಯಲಿಗೆಳೆದ ಬೆಡ್ ಬ್ಲಾಕಿಂಗ್ ವಿಚಾರವನ್ನು ಪ್ರಸ್ತಾಪಿಸಿ ಮಾಡಿದ ಟ್ವೀಟ್ ನಲ್ಲಿ, ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇರುವುದು ಇಡೀ ದೇಶಕ್ಕೆ ಗೊತ್ತು. ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ತೇಜಸ್ವಿ ಸೂರ್ಯ ಬೆಡ್ ಬ್ಲಾಕಿಂಗ್ ದಂಧೆ ತಡೆಯುವುದಕ್ಕಷ್ಟೇ ಸೀಮಿತ ಆಗದೆ, ಎಲ್ಲ ಸಂಸದರನ್ನು ಪ್ರಧಾನಿಯವರ ಬಳಿಗೆ ಕರೆದುಕೊಂಡು ಹೋಗಿ ಆಕ್ಸಿಜನ್ ಪೂರೈಕೆಗೆ ಒತ್ತಡ ಹೇರಲಿ ಎಂದು ಒತ್ತಾಯಿಸಿದ್ದಾರೆ.