Advertisement
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಪ್ರತ್ಯೇಕ ಧರ್ಮ ಮಾಡಲು ಹು°ನಾರ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜದಲ್ಲಿ ವಿಷಬೀಜ ಬಿತ್ತುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದು ಕಿಡಿ ಕಾರಿದರು.
Related Articles
Advertisement
ಜಾತಿ ಗಣತಿ ವರದಿ ಪ್ರಕಟಿಸಿ: ರಾಜ್ಯ ಸರ್ಕಾರ ಸುಮಾರು 180 ಕೋಟಿ ರೂ. ವೆಚ್ಚ ಮಾಡಿ, ಸಾವಿರಾರು ಸರ್ಕಾರಿ ನೌಕರರನ್ನು ಬಳಸಿಕೊಂಡು ಹಿಂದುಳಿದ ವರ್ಗಗಳ ಆಯೋಗದ ಮೂಲಕ ಜಾತಿ ಗಣತಿ ಮಾಡಿಸಿದೆ. ಕಳೆದ ನವೆಂಬರ್ ಅಧಿವೇಶನದಲ್ಲಿ ಈ ಬಗ್ಗೆ ಪ್ರಶ್ನಿಸಿದಾಗ ಡಿಸೆಂಬರ್ ಅಥವಾ ಜನವರಿಯಲ್ಲಿ ಜಾತಿ ಗಣತಿ ವರದಿ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದರು. ಈ ಗಡುವು ಮುಗಿದು ಅನೇಕ ತಿಂಗಳು ಕಳೆದರೂ ವರದಿ ಬಿಡುಗಡೆ ಮಾಡಿಲ್ಲ. ಆದ್ದರಿಂದ ಕೂಡಲೇ ಜಾತಿ ಗಣತಿ ವರದಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರ 126ನೇ ಜಯಂತಿ ಅಂಗವಾಗಿ ರಾಜ್ಯ ಸರ್ಕಾರ ಇತ್ತೀಚೆಗೆ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಸಮಾವೇಶ ಕಾಂಗ್ರೆಸ್‌ನ ಚುನಾವಣಾ ಪ್ರಚಾರದ ಉದ್ಘಾಟನೆ ಎಂದು ವ್ಯಂಗ್ಯವಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿ.ಎಸ್.ಯಡಿಯೂರಪ್ಪ ಅವರನ್ನು ಟೀಕೆ ಮಾಡುವುದರಲ್ಲೇ ಆನಂದ. ಅದಕ್ಕಾಗಿ ಈ ಸಮಾವೇಶ ಹಮ್ಮಿಕೊಂಡಿದ್ದರು ಎಂದು ಹೇಳಿದರು.
ವಿನಯ್-ಸಂತೋಷ್ ಪ್ರಕರಣ ರಾಜಕೀಯ ಷಡ್ಯಂತ್ರಬೆಂಗಳೂರು: ತಮ್ಮ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನಡುವೆ ಹುಳಿ ಹಿಂಡುವ ಕೆಲಸ ಮಾಡಲು ವಿಫಲರಾದವರು ಇದೀಗ ತಮ್ಮಿಬ್ಬರ ಆಪ್ತರಾದ ವಿನಯ್ ಮತ್ತು ಸಂತೋಷ್ ಅವರ ಮೂಲಕ ವೈಷಮ್ಯ ಮೂಡಿಸಲು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ. ಈ ಹಿಂದೆ ಸ್ನೇಹಿತರಾಗಿದ್ದ ವಿನಯ್ ಮತ್ತು ಸಂತೋಷ್ ಮಧ್ಯೆ ಏನೋ ಸಮಸ್ಯೆ ಬಂದಿದೆ. ಆದರೆ, ನನಗೆ ಮತ್ತು ಯಡಿಯೂರಪ್ಪ ಅವರಿಗೆ ಇದರ ಮಾಹಿತಿ ಇಲ್ಲ. ಹೀಗಿದ್ದರೂ ಪೊಲೀಸರು ರಾತ್ರೋರಾತ್ರಿ ಯಡಿಯೂರಪ್ಪ ಅವರ ಮನೆಗೆ ನುಗ್ಗಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದರೆ ಇದರ ಹಿಂದೆ ಕಾಂಗ್ರೆಸ್‌ನ ಷಡ್ಯಂತ್ರ ಇರುವುದು ಸ್ಪಷ್ಟ ಎಂದು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು. ನಾನು ಮತ್ತು ಯಡಿಯೂರಪ್ಪ ಒಟ್ಟಾಗಿ ಮತ್ತು ಚೆನ್ನಾಗಿರುವುದು ಕೆಲವರಿಗೆ, ಅದರಲ್ಲೂ ಕಾಂಗ್ರೆಸ್‌ನವರಿಗೆ ಇಷ್ಟವಿಲ್ಲ. ಹೀಗಾಗಿ ನಮ್ಮ ಆಪ್ತ ಸಹಾಯಕರ ಹೆಸರಿನಲ್ಲಿ ಇಬ್ಬರೂ ಬಡಿದಾಡಿಕೊಳ್ಳಲಿ ಎಂದು ಸಂತೋಷ್ ಮತ್ತು ವಿನಯ್ ಅವರನ್ನು ಪ್ರಕರಣದಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಿದ್ದಾರೆ. ಅದನ್ನು ಬಿಟ್ಟು ಕಾನೂನು ರೀತಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಹೇಳಿದರು.