Advertisement

ರಾಯಣ್ಣ ಬ್ರಿಗೇಡ್‌ ಮುಖಂಡರಿಗೆ ಸಿದ್ದರಾಮಯ್ಯ ಗಾಳ !

04:28 PM Oct 11, 2017 | |

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ದತೆಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷವನ್ನು ಅಧಿಕಾರಕ್ಕೆ ತಂದು ಇನ್ನೊಮ್ಮೆ ಮುಖ್ಯಮಂತ್ರಿಯಾಗಲು ಭಾರಿ ರಾಜಕೀಯ ಕಸರತ್ತುಗಳನ್ನು ಆರಂಭಿಸಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ‌ ಮುಖಂಡರನ್ನು ಕಾಂಗ್ರೆಸ್‌ಗೆ ಆಹ್ವಾನಿಸಿರುವ ಬಗ್ಗೆ ವರದಿಯಾಗಿದೆ. 

Advertisement

ಭಾರಿ ಹಗ್ಗಜಗ್ಗಾಟದ ನಡುವೆ ವಿಧಾನಪರಿಷತ್‌ ವಿಪಕ್ಷ ನಾಯಕ ಕೆ.ಎಸ್‌.ಈಶ್ವರಪ್ಪ ಬ್ರಿಗೇಡ್‌ ಬಿಟ್ಟು ಹೊರ ಬಂದಿದ್ದರು. ಆ ಬಳಿಕ ಸಂಘಟನೆ ಚಟುವಟಿಗೆಗಳು ಬಹುತೇಕ ಸ್ಥಗಿತಗೊಂಡಿದ್ದವು. 

 ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದ  ಹಿಂದುಳಿದ ಮತ್ತು ದಲಿತ ವರ್ಗದ ಕೆಲ ಮುಖಂಡರ ಮೇಲೆ ಇದೀಗ ಅಹಿಂದ ನಾಯಕ ಸಿದ್ದರಾಮಯ್ಯ ಕಣ್ಣು ಹಾಕಿದ್ದು, ಪಕ್ಷಕ್ಕೆ ಸೆಳೆಯುವ ಯತ್ನ ಮಾಡಿದ್ದಾರೆ. ಕೆಲ ಮುಖಂಡರಿಗೆ ಮುಂದಿನ ಚುನಾವಣೆಯಲ್ಲಿ ಟಿಕೇಟ್‌ ಸೇರಿದಂತೆ ಸೂಕ್ತ ಸ್ಥಾನಮಾನಗಳನ್ನು ನೀಡುವ ಭರವಸೆ ನೀಡಿದ್ದಾರೆ ಎನ್ನಾಲಾಗಿದೆ.

ರಾಯಣ್ಣ ಬ್ರಿಗೇಡ್‌ನ‌ಲ್ಲಿದ್ದ ಬಿಬಿಎಂಪಿ ಮಾಜಿ ಮೇಯರ್‌ ವೆಂಕಟೇಶ್‌ ಮೂರ್ತಿ ಅವರು ಬಿಜೆಪಿಯಲ್ಲಿ ಅಸಮಧಾನಹೊಂದಿದ್ದು, ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. 

Advertisement

Udayavani is now on Telegram. Click here to join our channel and stay updated with the latest news.

Next