Advertisement
ಸರ್ಕಾರದ ವಿರುದ್ಧ ಬಂಡಾಯ ಸಾರಿರುವ ರಮೇಶ್ ಜಾರಕಿಹೊಳಿ ಪಕ್ಷದ ಯಾವ ಮುಖಂಡರ ಮಾತಿಗೂ ಬೆಲೆ ಕೊಡದೆ, ತಮ್ಮಿಷ್ಟದಂತೆ ನಡೆದುಕೊಳ್ಳುತ್ತಿರುವುದರಿಂದ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರೂ, ತಲೆ ಕೆಡಿಸಿಕೊಳ್ಳದೆ ಅವರೊಂದಿಗೆ ಕಾಂಗ್ರೆಸ್‌ನ ಯಾವುದೇ ಶಾಸಕರೂ ಹೋಗದಂತೆ ಕಾಪಾಡಿಕೊಳ್ಳಲು ತಂತ್ರ ರೂಪಿಸಿದ್ದಾರೆಂದು ತಿಳಿದು ಬಂದಿದೆ.
Related Articles
Advertisement
ಅಸಮಾಧಾನಿತರಿಗೆ ತಾಕೀತು: ಈ ನಡುವೆ ಮೈತ್ರಿ ಸರ್ಕಾರ ಹಾಗೂ ಸಿಎಂ ಹಾಗೂ ಡಿಸಿಎಂ ವಿರುದ್ಧ ಬಹಿರಂಗ ಹೇಳಿಕೆ ನೀಡಿ, ಮೈತ್ರಿ ಪಕ್ಷಗಳಿಗೆ ಮುಜುಗರ ಉಂಟು ಮಾಡುತ್ತಿರುವ ಮಾಜಿ ಸಚಿವ ಚಲುವರಾಯ ಸ್ವಾಮಿ ಹಾಗೂ ಮಾಜಿ ಶಾಸಕ ರಾಜಣ್ಣ ಅವರನ್ನು ಸಿದ್ದರಾಮಯ್ಯ ಮಂಗಳವಾರ ತಮ್ಮ ನಿವಾಸಕ್ಕೆ ಕರೆಯಿಸಿ ಬುದ್ಧಿವಾದ ಹೇಳಿದ್ದಾರೆಂದು ತಿಳಿದು ಬಂದಿದೆ.
ಸಿಎಂ ಕುಮಾರಸ್ವಾಮಿ ಜತೆ ಚರ್ಚಿಸಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ, ವೇಣುಗೋಪಾಲ್ ಅವರು ಬೆಂಗಳೂರಿಗೆ ಆಗಮಿಸಿದ ನಂತರವಷ್ಟೇ ಸಂಪುಟ ವಿಸ್ತರಣೆ ಕುರಿತು ತೀರ್ಮಾನವಾಗಲಿದೆ. ಅಲ್ಲಿವರೆಗೂ ಯಾವುದೇ ತೀರ್ಮಾನವಿಲ್ಲ ಎಂದು ತಿಳಿಸಿದರು.
ಗುಲಾಂ ನಬಿ ಆಗಮನ ಅನುಮಾನ: ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರೂ ರಾಜ್ಯಕ್ಕೆ ಆಗಮಿಸುವ ನಿರೀಕ್ಷೆ ಇತ್ತಾದರೂ ಬದಲಾದ ಸನ್ನಿವೇಶದಲ್ಲಿ ಅವರು ಬರುವುದು ಅನುಮಾನ ಎಂದು ಹೇಳಲಾಗಿದೆ.