Advertisement
ಸಿದ್ದರಾಮಯ್ಯ ಅವರು ಮಾಡಿರುವ ಸರಣಿ ಟ್ವೀಟ್ ಗಳು
Related Articles
Advertisement
2013-18ರ ಅವಧಿಯಲ್ಲಿ ಕೋಮು ಸಂಘರ್ಷದಲ್ಲಿ ಹತ್ಯೆಗೀಡಾಗಿದ್ದ ಹತ್ತು ಹಿಂದುಗಳ ಹತ್ಯೆಯ ಆರೋಪಿಗಳು ಎಸ್ ಡಿಪಿಐ/ಪಿಎಫ್ಐ ಸಂಘಟನೆಯವರು. ಹನ್ನೊಂದು ಮುಸ್ಲಿಮ್ ಮತ್ತು ಹತ್ತು ಹಿಂದುಗಳ ಹತ್ಯೆಯ ಆರೋಪಿಗಳು ಭಜರಂಗದಳ ಮತ್ತು ಹಿಂದು ಜಾಗರಣಾ ವೇದಿಕೆಗೆ ಸೇರಿದವರು.
ನಾನು ಮುಖ್ಯಮಂತ್ರಿಯಾಗಿದ್ದಾಗ ಹತ್ಯೆಗೀಡಾಗಿದ್ದಾರೆಂದು ಆರೋಪಿಸಿ ನಿಮ್ಮ ಪಕ್ಷದವರೇ ಕೇಂದ್ರ ಸರ್ಕಾರಕ್ಕೆ ಕಳಿಸಿದ್ದ ಪಟ್ಟಿಯಲ್ಲಿದ್ದ ಜೀವಂತವಾಗಿ ಇರುವ ಅಶೋಕ್ ಪೂಜಾರಿ ಅವರ ಹೆಸರನ್ನು ಸೇರಿಸಿರುವ ನಿಮ್ಮ ಪಕ್ಷ ತನ್ನ ಬಣ್ಣ ತಾನೇ ಬಯಲು ಮಾಡಿಕೊಂಡು ನಗೆಪಾಟಲಿಗೀಡಾಗಿದ್ದು ನೆನಪಿದೆಯೇ?
ಹಿಂದೂಗಳ ಹತ್ಯೆ ಬಗ್ಗೆ ಕಣ್ಣೀರು ಸುರಿಸುತ್ತಿರುವ ನೀವು ಹೊನ್ನಾವರದ ಪರೇಶ್ ಮೇಸ್ತಾ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿದೆ. ನಿಮ್ಮ ಪ್ರಭಾವ ಬೀರಿ ಶೀಘ್ರವಾಗಿ ಈ ಹತ್ಯೆಯ ಅಪರಾಧಿಗಳನ್ನು ಪತ್ತೆಹಚ್ಚಿ ಶಿಕ್ಷಿಸಿ. ಒಬ್ಬ ಹಿಂದು ಯುವಕನ ಸಾವಿಗೆ ನ್ಯಾಯಕೊಡಿಸಲು ಪ್ರಯತ್ನಿಸುವಿರಾ?
ದಕ್ಷಿಣ ಕನ್ನಡದ ಪ್ರಕಾಶ್ ಕುಳಾಯಿ, ಕೇಶವ ಶೆಟ್ಟಿ, ಹರೀಶ್ ಪೂಜಾರಿ, ಬ್ರಹ್ಮಾವರದ ಪ್ರವೀಣ್ ಪೂಜಾರಿ, ಚಿಕ್ಕಮಗಳೂರಿನ ಕಲ್ಲಪ್ಪ ಹಂಡಿಬಾಗ್,ಮತ್ತು ಧನ್ಯಶ್ರೀ ಹಾಗೂ ವಿಜಯಪುರದ ದಾನಮ್ಮ ಹತ್ಯೆಯ ಆರೋಪಿಗಳನ್ನು ಕೂಡಾ ದಯವಿಟ್ಟು ಶಿಕ್ಷಿಸಿ. ಇವರೆಲ್ಲರೂ ಹಿಂದುಗಳು ಎನ್ನುವುದು ನೆನಪಲ್ಲಿರಲಿ.
ಮಂಗಳೂರಿನ ವಿನಾಯಕ ಬಾಳಿಗಾ ಅವರ ಹತ್ಯೆಯ ಪ್ರಮುಖ ಆರೋಪಿಯಾದ ನರೇಶ್ ಶೆಣೈಯ ಖಾಸಾ ದೋಸ್ತ್ ನಿಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್. ಕಟ್ಟಾ ಹಿಂದೂ ಆಗಿದ್ದ ಬಾಳಿಗಾ ಅವರ ಕೊಲೆಗಡುಕರನ್ನು ಶಿಕ್ಷಿಸಲು ಹೋರಾಡುತ್ತಿರುವ ಸೋದರಿಯರಿಗೆ ದಯವಿಟ್ಟು ನೀವಿಬ್ಬರೂ ಕೂಡಿನ್ಯಾಯ ಕೊಡಿಸಿ. ನೀವು ಮತ್ತು ನಿಮ್ಮ ಪಕ್ಷದ ನಾಯಕರು ಆಗಾಗ ಟಿಪ್ಪು ಸುಲ್ತಾನ ಹೆಸರಿನ ಜಪ ಮಾಡುವ ಮೊದಲು ನಿಮ್ಮದೇ ನಾಯಕರಾದ ಬಿ.ಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಆರ್. ಅಶೋಕ್ ಸೇರಿದಂತೆ ನಿಮ್ಮದೇ ಪಕ್ಷದ ನಾಯಕರು ಟಿಪ್ಪು ವೇಷ ಹಾಕಿ ಖಡ್ಗಹಿಡಿದು ಕುಣಿದಾಡಿದ ಪೋಟೊಗಳನ್ನು ನೋಡಿ ಕಣ್ತುಂಬಿಕೊಳ್ಳಿ. ಎಂದು ಟ್ವೀಟ್ ಮಾಡಿದ್ದಾರೆ.