Advertisement

ಸರ್ವಪಕ್ಷಗಳ ಸಮಿತಿಗೆ ಸಿದ್ದರಾಮಯ್ಯ ಆಗ್ರಹ

06:31 AM Jul 01, 2020 | Lakshmi GovindaRaj |

ಬೆಂಗಳೂರು: ಕೋವಿಡ್‌ 19 ಚಿಕಿತ್ಸೆ ಬಗ್ಗೆ ವ್ಯಾಪಕ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಸರ್ವಪಕ್ಷಗಳ ಪರಿಶೀಲನಾ ಸಮಿತಿ ರಚಿಸುವಂತೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ  ಅವರನ್ನು ಆಗ್ರಹಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್‌ ಮಾಡಿ, ಸರ್ವಪಕ್ಷಗಳ ಪರಿಶೀಲನಾ ಸಮಿತಿಯಲ್ಲಿ ವಿವಿಧ ಪಕ್ಷಗಳಲ್ಲಿರುವ ವೃತ್ತಿನಿರತ ಮತ್ತು ವೈದ್ಯಕೀಯ ಶಿಕ್ಷಣ ಹೊಂದಿರುವ ನಾಯಕರನ್ನು ಸೇರಿಸಿಕೊಳ್ಳಬಹುದೆಂದು ಸರ್ಕಾ ರಕ್ಕೆ ಸಲಹೆ  ನೀಡಿದ್ದಾರೆ.

Advertisement

ರೋಗಿಗಳಿಗೆ ತಾನು ಪಡೆಯುತ್ತಿರುವ ಚಿಕಿತ್ಸೆಯ ಸಂಪೂರ್ಣ ವಿವರ ಪಡೆಯುವ ಕಾನೂನುಬದ್ಧ ಹಕ್ಕಿದೆ. ಸೋಂಕಿತರಿಗೆ ನೀಡುತ್ತಿರುವ ಔಷಧಿ, ಅನುಸರಿಸುತ್ತಿರುವ ಚಿಕಿತ್ಸಾ ವಿಧಾನ ಏನು ಎಂಬುದನ್ನು ತಿಳಿಸದೆ ರೋಗಿಗಳನ್ನು ಕತ್ತಲಲ್ಲಿಟ್ಟು ಸರ್ಕಾರ  ಅನ್ಯಾಯ ಮಾಡುತ್ತಿದೆ. ಕೋವಿಡ್‌ 19 ಚಿಕಿತ್ಸೆಗೆ ಮೀಸಲಿಟ್ಟಿರುವ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಿರ್ಲಕ್ಷ, ತಾರತಮ್ಯ ನೀತಿ ಮತ್ತು ಭ್ರಷ್ಟಾಚಾರದ ಆರೋಪಗಳಿವೆ. ರಾಜಕೀಯ ಪ್ರಭಾವ ಬಳಸಿ  ಬಲವಿದ್ದವರು ಬದುಕಿಕೊಳ್ಳುತ್ತಾರೆ, ಬಡವರಿಗೆ ದಿಕ್ಕಿಲ್ಲದಂತಹ ಸ್ಥಿತಿ ಎದುರಾಗಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯ ಗುಣಮಟ್ಟದಲ್ಲಿ ರಾಜಿಯಾಗದಂತೆ ನೋಡಿಕೊಳ್ಳಬೇಕು. ನೀಡುತ್ತಿರುವ ಔಷಧಿ, ಅನುಸರಿಸಲಾಗುತ್ತಿರುವ ಚಿಕಿತ್ಸಾ ವಿಧಾನದದ ಪೂರ್ಣ ಮಾಹಿತಿ ನೀಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next