Advertisement

ಗಡಿ ವಿವಾದ: ಸರ್ವಪಕ್ಷ ಸಭೆಗೆ ಸಿದ್ದರಾಮಯ್ಯ ಒತ್ತಾಯ

07:59 PM Nov 21, 2022 | Team Udayavani |

ಬೆಂಗಳೂರು: ಬೆಳಗಾವಿ ಗಡಿ ವಿವಾದದ ಬಗ್ಗೆ ಮಹಾರಾಷ್ಟ್ರ ಸರ್ಕಾರ ವಿಶೇಷ ಆಸಕ್ತಿ ತೋರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ತಕ್ಷಣ ಸರ್ವಪಕ್ಷಗಳ ಸಭೆ ಕರೆದು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಬೇಕೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Advertisement

ಈ ವಿಚಾರವಾಗಿ ರಾಜ್ಯ ಸರ್ಕಾರಕ್ಕೆ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ಬೆಳಗಾವಿ ಗಡಿ ವಿವಾದದ ಬಗ್ಗೆ ನವೆಂಬರ್‌ 23ರಂದು ಸುಪ್ರೀಂಕೋರ್ಟ್‌ ನಡೆಸಲಿರುವ ವಿಚಾರಣೆಯನ್ನು ಎದುರಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರು ಸಿದ್ಧತೆ ನಡೆಸಿದ್ದಾರೆ. ಸುಪ್ರೀಂಕೋರ್ಟ್‌ನಲ್ಲಿ ತಮ್ಮ ರಾಜ್ಯ ಮಂಡಿಸಬೇಕಾದ ವಾದದ ಬಗ್ಗೆ ಸಮಾಲೋಚನೆ ನಡೆಸಲು ವಿರೋಧ ಪಕ್ಷಗಳ ಸದಸ್ಯರನ್ನೊಳಗೊಂಡ ಸಮಿತಿ ರಚಿಸಿರುವುದು ಆ ರಾಜ್ಯ ಗಡಿವಿವಾದವನ್ನು ಎಷ್ಟೊಂದು ಗಂಭೀರವಾಗಿ ಸ್ವೀಕರಿಸಿದೆ ಎನ್ನುವುದಕ್ಕೆ ಸಾಕ್ಷಿ.

ಆದ್ದರಿಂದ ನೆಲ-ಜಲ-ಭಾಷೆಯ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಗೆ ಬದ್ಧವಾಗಿ ರಾಜ್ಯ  ಸರ್ಕಾರ ಕೈಗೊಳ್ಳುವ ಕ್ರಮಗಳನ್ನು ನಮ್ಮ ಪಕ್ಷ ಬೆಂಬಲಿಸುತ್ತದೆ. ಕಾಲವ್ಯಯ ಮಾಡದೆ ಮುಖ್ಯಮಂತ್ರಿ ಅವರು ವಿರೋಧ ಪಕ್ಷಗಳ ಸಭೆ ಕರೆದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸಮಾಡಬೇಕೆಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next