Advertisement

ಹೊರ ರಾಜ್ಯದಲ್ಲಿ ಸಿಲುಕಿರುವ ರಾಜ್ಯದ ಕಾರ್ಮಿಕರ ರಕ್ಷಣೆಗೆ ಸಿದ್ದರಾಮಯ್ಯ ಆಗ್ರಹ

08:10 AM May 11, 2020 | Sriram |

ಬೆಂಗಳೂರು: ಬೇರೆ ರಾಜ್ಯಗಳಲ್ಲಿ ಸಿಲುಕಿಕೊಂಡಿರುವ ರಾಜ್ಯದ ಕಾರ್ಮಿಕರು ಸ್ವಂತ ಊರುಗಳನ್ನು ತಲುಪಲು ಸರಕಾರ ಕೂಡಲೇ ವ್ಯವಸ್ಥೆ ಮಾಡಬೇಕು ಎಂದು  ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

Advertisement

ಮುಖ್ಯಮಂತ್ರಿ ಬಿ. ಎಸ್‌. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ರಾಜ್ಯದಲ್ಲಿರುವ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಿಕೊಡಲು ಮತ್ತು ಹೊರ ರಾಜ್ಯಗಳಲ್ಲಿರುವವರನ್ನು ಇಲ್ಲಿಗೆ ಕರೆತರಲು ಸರಕಾರ ರೈಲು ವ್ಯವಸ್ಥೆ ಮಾಡಬೇಕು. ಕಾರ್ಮಿಕರ ಪ್ರಯಾಣ ವೆಚ್ಚದಲ್ಲಿ ಶೇ.85ರಷ್ಟನ್ನು ಭರಿಸುವುದಾಗಿ ಕೇಂದ್ರ ಸರಕಾರ ಈಗಾಗಲೇ ಹೇಳಿದೆ. ಉಳಿದ ವೆಚ್ಚವನ್ನು ರಾಜ್ಯ ಸರಕಾರ ಭರಿಸುವ ಮೂಲಕ ಕಾರ್ಮಿಕರ ಪ್ರಯಾಣಕ್ಕೆ ಅನುಕೂಲ ಮಾಡಿಕೊಡಬೇಕು. ಇದಕ್ಕಾಗಿ ಮಾಡುವ ವೆಚ್ಚ ಸರಕಾರಕ್ಕೆ ದೊಡ್ಡ ಹೊರೆಯಾಗುವುದಿಲ್ಲ.

ಬೆಂಗಳೂರಿನಿಂದ ಹೋಗುವ ಕಾರ್ಮಿಕರಿಗೆ ಅಕ್ಕಪಕ್ಕದ ಜಿಲ್ಲೆಗಳ ರೈಲ್ವೇ ನಿಲ್ದಾಣಕ್ಕೆ ಹೋಗುವಂತೆ ಹೇಳಿದೆಯಾದರೂ ಅಲ್ಲಿಗೆ ಹೋಗಲು ಯಾವುದೇ ಸೌಕರ್ಯ ಇಲ್ಲದ ಕಾರಣ ಅವರಿಗೆ ಬಸ್‌ ವ್ಯವಸ್ಥೆ ಮಾಡಬೇಕು. ಕಾರ್ಮಿಕರು ಸುರಕ್ಷಿತವಾಗಿ ಊರು ತಲುಪುವವರೆಗೆ ಊಟದ ಸೌಲಭ್ಯವನ್ನೂ ಒದಗಿಸಬೇಕು ಎಂದವರು ಸರಕಾರವನ್ನು ಆಗ್ರಹಿಸಿದ್ದಾರೆ.

ಕಾರ್ಮಿಕರ ವಿಚಾರದಲ್ಲಿ ಸರಕಾರ ತನ್ನ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯ ಧೋರಣೆ ಬಿಡಬೇಕು. ಪರಿಸ್ಥಿತಿಯನ್ನು ಎಚ್ಚರಿಕೆ ಮತ್ತು ಮಾನವೀಯತೆಯಿಂದ ನಿಭಾಯಿಸಬೇಕೆಂದು ಸಿದ್ದರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next