Advertisement

ನೇಕಾರರ ಪರಿಹಾರ ಬಿಡುಗಡೆಗೆ ಸಿದ್ದರಾಮಯ್ಯ ಒತ್ತಾಯ

07:27 AM Jun 26, 2020 | Lakshmi GovindaRaj |

ಬೆಂಗಳೂರು: ನೇಕಾರರಿಗೆ ಘೋಷಣೆ ಮಾಡಿರುವ ಪರಿಹಾರದ ಪ್ಯಾಕೇಜನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ  ಹೊರಡಿಸಿರುವ ಅವರು, ಸರ್ಕಾರ ಪ್ರತಿ ನೇಕಾರರ ಕುಟುಂಬಕ್ಕೆ 2,000 ರೂ. ನೀಡುವುದಾಗಿ ಘೋಷಿಸಿ 2 ತಿಂಗಳು ಕಳೆದರೂ ಒಂದು ರೂಪಾಯಿ ಕೂಡ ತಲುಪಿಸಿಲ್ಲ. ಸರ್ಕಾರ ನೇಕಾರರನ್ನು ನಿರ್ಲಕ್ಷಿಸಿದೆ.

Advertisement

ಸಮಸ್ಯೆಗಳನ್ನು ಪರಿಹರಿಸುವಲ್ಲಿ  ವಿಳಂಬ ನೀತಿ ಅನುಸರಿಸುತ್ತಿದೆ. ತುರ್ತಾಗಿ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು. ನೇಕಾರರ ಸಂಕಷ್ಟಗಳನ್ನು ನೀಗಿಸಲು ಕೃಷಿ ಕ್ಷೇತ್ರದಲ್ಲಿ ಅನುಸರಿಸಲಾಗುತ್ತಿರುವ ಆವರ್ತ ನಿಧಿ ಪದತಿಯನ್ನು ನೇಕಾರಿಕೆಗೂ ಅಳವಡಿಸಿ  ಬಿಕ್ಕಟ್ಟು ಬಂದಾಗ ಉಪಯೋಗಿಸಲು ಕ್ರಮವಹಿಸಬೇಕು. ಬಿಕ್ಕಟ್ಟಿನ ಈ ಸಂದರ್ಭದಲ್ಲಿ ಅವರ್ತ ನಿಧಿ ಸ್ಥಾಪಿಸಿ ಉಪಯೋಗಿಸಬೇಕು.

ಸಂಕಷ್ಟದಲ್ಲಿರುವ ನೇಕಾರರು ಸೇರಿದಂತೆ ಪ್ರತಿ ಕುಟುಂಬಕ್ಕೆ ಕನಿಷ್ಠ 10,000 ರೂ.ತುರ್ತಾಗಿ ನೀಡಬೇಕು.  ಕೋವಿಡ್‌ 19 ಬಿಕ್ಕಟ್ಟು ಬಗೆಹರಿಯುವವರೆಗೆ ಉಚಿತವಾಗಿ ಆಹಾರ ಧಾನ್ಯಗಳ ಕಿಟ್‌ಗಳನ್ನು ನೀಡಬೇಕು. ನೇಕಾರರು ತಯಾರಿಸಿದ ಉತ್ಪನ್ನಗಳನ್ನು ಆಧರಿಸಿ ಅವುಗಳ ಮೇಲೆ ಸಹಕಾರಿ ಮತ್ತು ಇನ್ನಿತರೆ ಬ್ಯಾಂಕುಗಳ ಮೂಲಕ ಸುಲಭವಾಗಿ  ಸಾಲ ಸಿಗುವಂತೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next