ಬೆಂಗಳೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು ಡಿ.ಜೆ. ಹಳ್ಳಿಗೆ ಭೇಟಿ ನೀಡಿದರು. ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಗಲಭೆ ಸಂದರ್ಭದಲ್ಲಿ ಹಾನಿಗೊಳಗಾಗಿರುವ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ, ಪೊಲೀಸ್ ಠಾಣೆಗೆ ತೆರಳಿ ಪರಿಶೀಲಿಸಿದರು.
ಡಿಸಿಪಿ ಶರಣಪ್ಪ ಸೇರಿದಂತೆ ಪೊಲೀಸ್ ಅಧಿಕಾರಿಗಳ ಜೊತೆ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿ ಘಟನೆಯ ಬಗ್ಗೆ ವಿವರ ಪಡೆದುಕೊಂಡರು.
ಶಾಸಕರಾದ ರಿಜ್ವಾನ್ ಹರ್ಷದ್, ನಸೀರ್ ಅಹಮದ್, ವೆಂಕಟರಮಣಪ್ಪ ಮತ್ತಿತರರು ಹಾಜರಿದ್ದರು.
ಫೇಸ್ ಬುಕ್ ಪೋಸ್ಟ್ ಒಂದರ ಸಂಬಂಧ ಆಗಸ್ಟ್ 11ರಂದು ಡಿಜೆ ಹಳ್ಳಿ, ಕೆಜಿ ಹಳ್ಳಿ ಮತ್ತು ಕಾವಲ್ ಬೈರಸಂಧ್ರದಲ್ಲಿ ಗಲಭೆ ನಡೆದಿತ್ತು. ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದರು. ಈ ಸಂಬಂಧ ಈಗಾಗಲೇ ನೂರಾರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.