Advertisement

ಜಿ.ಟಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ ಸಿದ್ದರಾಮಯ್ಯ

03:03 PM May 25, 2022 | Team Udayavani |

ಮೈಸೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಬುಧವಾರ ಮೈಸೂರಿನ ಗುಂಗ್ರಾಲ್ ಛತ್ರ ಗ್ರಾಮದಲ್ಲಿರುವ ಮಾಜಿ ಸಚಿವ ಜಿ.ಟಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಮೊಮ್ಮಗಳ ನಿಧನದಿಂದ ದುಃಖತಪ್ತರಾಗಿರುವ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ವೇಳೆ ಮಾಜಿ ಸಚಿವ ಡಾ.ಎಚ್.ಸಿ. ಮಹಾದೇವಪ್ಪ, ಶಾಸಕರಾದ ಮಂಜುನಾಥ್, ಡಾ.ತಿಮ್ಮಯ್ಯ ಮತ್ತಿತರರು ಹಾಜರಿದ್ದರು.

Advertisement

ಈ ನಿವಾಸದಲ್ಲಿ ಕೆಲ ಹೊತ್ತು ಇದ್ದ ಸಿದ್ದರಾಮಯ್ಯ ಅವರು ಮಕ್ಕಳೊಂದಿಗೂ ಮಾತನಾಡಿದರು.

ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡರ ಮೊಮ್ಮಗಳು, ಮೈಸೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ, ರಾಜ್ಯ ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ ಹರೀಶ್ ಗೌಡ ಅವರ ಪುತ್ರಿ 3 ಗೌರಿ ಮೇ 14 ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಳು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next