Advertisement
ವಿಶೇಷವಾಗಿ ಬಂಡಾಯವೆದ್ದು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ 17 ಜನ ಅನರ್ಹ ಶಾಸಕರಲ್ಲಿ ನಾಲ್ವರು ಕುರುಬ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಅವರೆಲ್ಲರೂ ಒಂದು ಕಾಲದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು. ಎಚ್.ವಿಶ್ವನಾಥ್, ಬೈರತಿ ಬಸವರಾಜ್, ಎಂ.ಟಿ.ಬಿ.ನಾಗರಾಜ್ ಹಾಗೂ ರಾಣೆಬೆನ್ನೂರಿನ ಪಕ್ಷೇತರ ಶಾಸಕರಾಗಿದ್ದ ಆರ್. ಶಂಕರ್ ಅವರು ಸಿದ್ದರಾಮಯ್ಯ ಪರೋಕ್ಷ ಬೆಂಬಲದಿಂದಲೇ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದ್ದವು.
Related Articles
Advertisement
ಸ್ವಜಾತಿಯವರೆಂದು ಕಾಂಗ್ರೆಸ್‌ಗೆ ಕರೆದುಕೊಂಡು ಬಂದಿದ್ದರು: ಸಿದ್ದರಾಮಯ್ಯ ಜೆಡಿಎಸ್‌ನಿಂದ ಉಚ್ಚಾಟನೆಗೊಂಡಾಗ ಎಚ್.ವಿಶ್ವನಾಥ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗುತ್ತಿದೆ. ಆದರೆ, ಸಿದ್ದರಾಮಯ್ಯ ಸಮುದಾಯಕ್ಕೆ ಸೇರಿದವರು ಎನ್ನುವ ಕಾರಣಕ್ಕೆ ಅವರು ಮುಖ್ಯಮಂತ್ರಿಯಾಗಲಿ ಎಂದು ಬಯಸಿದವರಲ್ಲಿ ವಿಶ್ವನಾಥ ಕೂಡ ಒಬ್ಬರು. ಆದರೆ, ಬದಲಾದ ರಾಜಕೀಯದಲ್ಲಿ ವಿಶ್ವನಾಥ್ ಅವರು ಸಿದ್ದರಾಮಯ್ಯ ವಿರುದ್ಧ ತಿರುಗಿ ಬಿದ್ದಿದ್ದು, ಈಗ ಅವರ ವಿರುದ್ಧ ತವರು ಜಿಲ್ಲೆಯಲ್ಲಿಯೇ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಹೊಣೆಗಾರಿಕೆ ಸಿದ್ದರಾಮಯ್ಯ ಅವರ ಮೇಲಿದೆ. ಹದಿನೇಳು ಕ್ಷೇತ್ರಗಳಲ್ಲಿ ನಾಲ್ಕು ಕ್ಷೇತ್ರಗಳ ಫಲಿತಾಂಶ ಸಿದ್ದರಾಮಯ್ಯ ಅವರ ರಾಜಕೀಯದ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ. ಅದರಲ್ಲಿ ಸಿದ್ದರಾಮಯ್ಯ ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತಾರೆ ಎನ್ನುವುದು ಕುತೂಹಲದ ಸಂಗತಿ.
ಹೇಡಿ ಸರ್ಕಾರಕ್ಕೆ ಕೇಂದ್ರವನ್ನು ಪ್ರಶ್ನಿಸುವ ಧೈರ್ಯವಿಲ್ಲಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದ ಬೆಳೆ ನಾಶವಾಗಿ ರೈತರು ಕಂಗಾಲಾಗಿದ್ದು, ಆತ್ಮಹತ್ಯೆಯ ದಾರಿ ತುಳಿಯುತ್ತಿದ್ದಾರೆ. ಆದರೆ, ಪರಿಹಾರ ನೀಡದ ಕೇಂದ್ರ ಸರ್ಕಾರವನ್ನು ಪ್ರಶ್ನಿಸುವ ಧೈರ್ಯ ರಾಜ್ಯದ ಹೇಡಿ ಸರ್ಕಾರಕ್ಕೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸರಣಿ ಟ್ವೀಟ್ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರೈತರ ಸಾವಿಗೆ ಕೇಂದ್ರ ಸರ್ಕಾರವನ್ನು ಹೊಣೆಯಾಗಿಸಿದ್ದಾರೆ. ಪರಿಹಾರ ನೀಡಿಕೆ ವಿಚಾರದಲ್ಲಿ ವಿಳಂಬ ಧೋರಣೆ ತಾಳುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ. ಅತಿವೃಷ್ಟಿಯಿಂದ ಮನೆ-ತೋಟ-ಗದ್ದೆಯನ್ನು ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹಾವೇರಿ, ಗದಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಐವರು ರೈತರ ಕುಟುಂಬಕ್ಕೆ ನನ್ನ ಸಂತಾಪಗಳು. ಇದೇ ರೀತಿ, ನೂರಾರು ರೈತರು ಅಸಹಾಯಕರಾಗಿ ಆತ್ಮಹತ್ಯೆಯ ದಾರಿಯಲ್ಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಇದ್ದೂ ಸತ್ತಂತಿವೆ ಎಂದಿದ್ದಾರೆ. ಪ್ರವಾಹ ಪೀಡಿತ ರೈತರ ಬ್ಯಾಂಕುಗಳಲ್ಲಿನ ಸಾಲ ಬಾಕಿಗಾಗಿ ನೋಟಿಸ್ ಜಾರಿ ಮಾಡಿ, ಕಿರುಕುಳ ನೀಡುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ರಾಜ್ಯ ಸರ್ಕಾರಕ್ಕೇನಾದರೂ ಒಂದಿಷ್ಟು ಮಾನವೀಯತೆ ಎನ್ನುವುದು ಇದ್ದರೆ ಇಂತಹ ಕ್ರೌರ್ಯವನ್ನು ತಕ್ಷಣ ನಿಲ್ಲಿಸಬೇಕು. ರಾಜ್ಯಕ್ಕೆ ಬಂದೆರಗಿದ ಅತಿವೃಷ್ಟಿಯಿಂದ 36 ಸಾವಿರ ಕೋಟಿ ರೂ.ನಷ್ಟವಾಗಿದೆ ಎಂದು ಅಂದಾಜು ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ ನಯಾಪೈಸೆ ನೆರವು ಬಂದಿಲ್ಲ. ರಾಜ್ಯದ ಹೇಡಿ ಸರ್ಕಾರಕ್ಕೆ ಕೇಂದ್ರವನ್ನು ಪ್ರಶ್ನಿಸುವ ಧೈರ್ಯ ಇಲ್ಲ ಎಂದು ಕಿಡಿ ಕಾರಿದ್ದಾರೆ. ಈಗಿನ ಪ್ರಧಾನಿ ಎಲ್ಲಿದ್ದಾರೆ?: 2009ರಲ್ಲಿ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿದ್ದಾಗ ಸಂಭವಿಸಿದ ಅತಿವೃಷ್ಟಿಯ ಸಂದರ್ಭದಲ್ಲಿ ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಧಾವಿಸಿ ಬಂದು ಸಮೀಕ್ಷೆ ನಡೆಸಿ, ತಕ್ಷಣ 1,500 ಕೋಟಿ ರೂ.ಪರಿಹಾರ ಘೋಷಿಸಿದ್ದರು. ಈಗಿನ ಪ್ರಧಾನಿ ಎಲ್ಲಿದ್ದಾರೆ? ದಿನಕ್ಕೊಂದು ದೇಶ ಸುತ್ತುವ, ಗಳಿಗೆಗೊಂದು ವೇಷ ಬದಲಿಸುವ ಈಗಿನ ಪ್ರಧಾನಿಗೆ ಒಂದು ಘಳಿಗೆ ಬಂದು ಸಂತ್ರಸ್ತರ ಗೋಳು ಕೇಳುವ ಕನಿಷ್ಠ ಮಾನವೀಯತೆ ಇಲ್ಲದಿರುವುದು ದುರಂತ ಎಂದು ಕುಟುಕಿದ್ದಾರೆ. ನಮ್ಮ ಪ್ರತಿಭಾವಂತ ವಿಜ್ಞಾನಿಗಳು ಹಗಲಿರುಳು ಶ್ರಮಿಸಿ ನಡೆಸಿದ ಚಂದ್ರಯಾನ-2 ಪ್ರಯೋಗ, ನರೇಂದ್ರ ಮೋದಿ ಹಾಜರು ಹಾಕಿದರೂ ವಿಫಲವಾಯಿತು. ಪ್ರಧಾನಿಗಳು ಅಷ್ಟೇ ಸಮಯವನ್ನು ಅತಿವೃಷ್ಟಿ ಪೀಡಿತ ಪ್ರದೇಶದ ಭೇಟಿಗೂ ನೀಡಿದ್ದರೆ ಪ್ರಾಯಶ್ಚಿತ ಮಾಡಿಕೊಂಡಂತಾಗುತ್ತಿತ್ತು. ಕಾಲ್ಗುಣದಂತಹ ಮೌಡ್ಯದಲ್ಲಿ ನನಗೆ ನಂಬಿಕೆ ಇಲ್ಲ. ಆದರೆ, 2009ರಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗಲೇ ಅತಿವೃಷ್ಟಿ ಬಂದೆರಗಿತು. ನಮ್ಮ ಕಾಲದಲ್ಲಿ ರೈತರು ಆತ್ಮಹತ್ಯೆಯ ದಾರಿ ಹಿಡಿದಾಗ ನಮ್ಮ ಸರ್ಕಾರ ಕೃಷಿಭಾಗ್ಯ, ಅನ್ನಭಾಗ್ಯ, ಕ್ಷೀರಧಾರೆಯಂತಹ ಯೋಜನೆಗಳ ಮೂಲಕ ನೆರವಾಗಿ ಆತ್ಮಹತ್ಯೆಯ ಸರಣಿಯನ್ನು ತಡೆದಿದ್ದೆವು ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ನೆರೆಪೀಡಿತ ಪ್ರದೇಶಕ್ಕೆ ಪರಿಹಾರಕ್ಕಾಗಿ ಒತ್ತಾಯಿಸದಂತೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ. ಕೇಂದ್ರ ಸರ್ಕಾರ ದಿವಾಳಿಯಾಗಿ ಹೋಗಿರುವ ಸೂಚನೆ ಇದು. ಇದು ನಿಜವಲ್ಲದೆ ಇದ್ದರೆ ಮೊದಲು ದೇಶದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದ್ದಾರೆ. ತಾವು ಬಲಿಷ್ಠ ಮುಖ್ಯಮಂತ್ರಿಯಾಗಿದ್ದೆ ಎಂದುಕೊಳ್ಳುವ ಸಿದ್ದರಾಮಯ್ಯ, ಮನಮೋಹನ ಸಿಂಗ್ ಪ್ರಧಾನಿಯಾಗಿದ್ದ ವೇಳೆ ರಾಜ್ಯಕ್ಕೆ ಎಷ್ಟು ಪರಿಹಾರ ನೀಡಿದ್ದರು ಎನ್ನುವುದನ್ನು ತಿಳಿದುಕೊಳ್ಳಬೇಕು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವ ಧಿಯಲ್ಲಿ ನೆರೆ ಹಾವಳಿ ಹಾಗೂ ಬರ ಪರಿಹಾರಕ್ಕೆ ಕೇಂದ್ರ ಬಿಜೆಪಿ ಸರ್ಕಾರವೇ ಅತಿ ಹೆಚ್ಚು ಅನುದಾನ ನೀಡಿತ್ತು. ಹಳೇ ಅಂಕಿ-ಅಂಶವನ್ನು ಪರಿಶೀಲಿಸಿ ಸಿದ್ದರಾಮಯ್ಯ ಮಾತನಾಡಬೇಕು.
-ಪ್ರಹ್ಲಾದ ಜೋಶಿ, ಕೇಂದ್ರ ಸಚಿವ * ಶಂಕರ ಪಾಗೋಜಿ