ರಾಯಚೂರು: ಗೋಮಾತೆ ಶಾಪದಿಂದ ಸಿದ್ದರಾಮಯ್ಯ ಸರ್ಕಾರ ಕಳೆದುಕೊಂಡರು. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತರು. ಆದರೂ ಸಿದ್ದರಾಮಯ್ಯಗೆ ಬುದ್ಧಿ ಬಂದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಕುಟುಕಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಹಿಂದೆ ಗೋವಿನ ಬಗ್ಗೆ ಮಾತನಾಡಿದ್ದಕ್ಕೆ ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿತು. ಗೋಹತ್ಯೆ ತಡೆಯಲು ಹೋದ ಯುವಕ ಕೊಲೆ ಮಾಡಲಾಯಿತು. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವುದು ಬಿಟ್ಟು ಕೊಲೆಗಡುಕರ ರಕ್ಷಣೆ ಮಾಡಿದರು ಎಂದರು.
ಇದನ್ನೂ ಓದಿ:ದೇಣಿಗೆ ಲೆಕ್ಕ ಕೇಳಲು ಸಿದ್ದರಾಮಯ್ಯ ಯಾವನು? ಸಚಿವ ಈಶ್ವರಪ್ಪ ವಾಗ್ದಾಳಿ
ಇದೀಗ ಶ್ರೀರಾಮನ ಬಗ್ಗೆ ಮಾತಾಡುತ್ತಿದ್ದಾರೆ. ಆಗ ಗೋವಿನ ಬಗ್ಗೆ ಮಾತಾಡಿದ್ದಕ್ಕೆ ಸರ್ಕಾರ ನೆಲಕಚ್ಚಿತ್ತು. ಈಗ ರಾಮನ ಬಗ್ಗೆ ಮಾತಾಡಿದರೆ ನೆಲದ ಒಳಗೇ ಹೋಗುತ್ತಾರೆ ಎಂದು ಈಶ್ವರಪ್ಪ ಟಾಂಗ್ ಕೊಟ್ಟರು.
ಇದನ್ನೂ ಓದಿ: ತುಳು ಚಿತ್ರರಂಗ @50: ‘ಎನ್ನ ತಂಗಡಿ’ ಯಿಂದ ‘ಗಮ್ಜಾಲ್’ ವರೆಗೆ ಚಿತ್ರರಂಗ ನಡೆದು ಬಂದ ಪಯಣ