Advertisement

ಕುಮಾರಸ್ವಾಮಿಗೆ ತಿರುಗೇಟು ನೀಡಿದ ಸಿದ್ದರಾಮಯ್ಯ

10:30 AM Aug 27, 2019 | Team Udayavani |

ಮೈಸೂರು: ಕುಮಾರಸ್ವಾಮಿ ನನ್ನನ್ನು ಶತ್ರುವಿನಂತೆ ನೋಡಿದ್ದೆ ಸಮಸ್ಯೆ ಆಗಿದ್ದು.ನನ್ನನ್ನು ಮಿತ್ರನಂತೆ ಅಥವಾ ಮೈತ್ರಿ ಪಕ್ಷದವರಂತೆ ನೋಡಿದಿದ್ದರೆ ಏನೂ ಆಗುತ್ತಿರಲಿಲ್ಲ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

Advertisement

ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆ ಸಂಬಂಧ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು ನನ್ನನ್ನು ಶತ್ರು ಅಂದುಕೊಂಡು ದ್ವೇಷ ಸಾಧಿಸುತ್ತಲೇ ಬಂದರು. ಪ್ರೀತಿಯಿಂದ ನೋಡಿ, ಸ್ನೇಹಿತನಂತೆ ಕಂಡಿದ್ದರೆ ಏನೂ ಆಗುತ್ತಿರಲಿಲ್ಲ.
ಕನಿಷ್ಠ ಪಕ್ಷ ಮೈತ್ರಿ ಪಕ್ಷದ ನಾಯಕನಂತೆಯೂ ನನ್ನನ್ನು ಕಾಣಲಿಲ್ಲ.ಹಾಗಾಗಿ ಇಷ್ಟೇಲ್ಲ ಸಮಸ್ಯೆ ಆದವು ಎಂದರು.

ನನ್ನನ್ನು ಕ್ಲರ್ಕ್ ರೀತಿ ನಡೆಸಿಕೊಂಡರು ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಕುಮಾರಸ್ವಾಮಿಗೆ ತೀವ್ರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದರು.

ಅಧಿಕಾರ ನಡೆಸಲು ಬಾರದವರು ಹೀಗೆಯೇ ಹೇಳೋದು‌.ಅದಕ್ಕೆ ನಾವೇನು ಮಾಡೋಕೆ ಆಗುತ್ತೆ ಎಂದರು.

ಬಿಜೆಪಿ ಹೈಕಮಾಂಡ್‌ಗೆ ಯಡಿಯೂರಪ್ಪ ಒಲ್ಲದ ಶಿಶು
ಸಿಎಂ ಬಿ.ಎಸ್‌ .ಯಡಿಯೂರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ ಬಿಜೆಪಿ ಹೈಕಮಾಂಡ್‌ಗೆ ಯಡಿಯೂರಪ್ಪ ಒಲ್ಲದ ಶಿಶು. ಒಂದು ತಿಂಗಳಿನಿಂದ ರಾಜ್ಯದಲ್ಲಿ ಸರ್ಕಾರವೇ ಇಲ್ಲ.

Advertisement

ಯಡಿಯೂರಪ್ಪ ದೆಹಲಿ ಬೆಂಗಳೂರು ನಡುವೆ ಓಡಾಡುತ್ತಿದ್ದಾರೆ. ಅಮೀತ್ ಶಾ ಯಡಿಯೂರಪ್ಪರನ್ನು ಭೇಟಿಯೂ ಮಾಡುತ್ತಿಲ್ಲ.ಸರ್ಕಾರ ನಡೆಸಲು ಸ್ವಾತಂತ್ರ್ಯವನ್ನು ಕೊಡುತ್ತಿಲ್ಲ.ಬಿಜೆಪಿ ಸರ್ವಾಧಿಕಾರದ ಆಡಳಿತದ ಮೇಲೆ ನಂಬಿಕೆ ಜಾಸ್ತಿ. ಯಡಿಯೂರಪ್ಪ ನವರ ಆಡಳಿತವನ್ನು ಬಿಜೆಪಿ ಹೈಕಮಾಂಡ್ ತನ್ನ ಕೈಯಲ್ಲಿ ಹಿಡಿದುಕೊಂಡಿದೆ.

ರಾಜ್ಯದಲ್ಲಿ ಇಷ್ಟೊಂದು ನೆರೆ ಬರ ಇದ್ದರೂ ಒಂದು ರೂಪಾಯಿ ಕೂಡ ಬಿಎಸ್‌ವೈರಿಂದ ತರಲು ಆಗಲಿಲ್ಲ.ಇವರು ಸಚಿವರಿಗೆ ಖಾತೆ ಹಂಚಿಕೆಯನ್ನು ಮಾಡಲಿಲ್ಲ.ಜನರು ಇವರಿಗೆ 113 ಸೀಟು ಕೊಟ್ಟಿಲ್ಲ.ಯಡಿಯೂರಪ್ಪ ಹೈಕಮಾಂಡ್‌ ಗೂ ಬೇಕಾಗಿಲ್ಲ.ಇಬ್ಬರ ಮಧ್ಯೆ ರಾಜ್ಯದಲ್ಲಿ ಒಂದು ತಿಂಗಳಿನಿಂದ ಸರ್ಕಾರ ಇಲ್ಲದಂತಾಗಿದೆ ಎಂದು ಲೇವಡಿ ಮಾಡಿದರು.

ಬಿಜೆಪಿ ಅನೈತಿಕವಾಗಿ ಆಗಿರುವ ಸರ್ಕಾರ.ಅಸಂವಿಧಾನಾತ್ಮಕವಾಗಿ ಅಧಿಕಾರಕ್ಕೆ ಬಂದಿದೆ.ಹಿಂಬಾಗಿಲಿನಿಂದ ಕುದುರೆ ವ್ಯಾಪಾರ ಮಾಡಿ ಅಧಿಕಾರಕ್ಕೆ ಬಂದಿದೆ.
ಯಡಿಯೂರಪ್ಪಗೆ ಅತೃಪ್ತ ಶಾಸಕರಿಂದ‌ ಧಮ್ಕಿ ಹಾಕುತ್ತಿದ್ದಾರೆ ಬಿಜೆಪಿಯಲ್ಲೂ ಅತೃಪ್ತರಿದ್ದಾರೆ.ಆದ್ದರಿಂದ ಖಾತೆ ಹಂಚಲು ಸಾಧ್ಯವಾಗುತ್ತಿಲ್ಲ ಎಂದರು.

ಅನರ್ಹ ಶಾಸಕರು ಅತಂತ್ರರಾಗಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು ಅತಂತ್ರರಾಗಲಿ ಅಂತಾನೇ ನಾವು ಅನರ್ಹ ಮಾಡಿದ್ದೇವೆ.ಅವರು ಅತಂತ್ರರಾಗಬೇಕು ಅನ್ನೋದೆ ನಮ್ಮ ಆಶಯ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next