Advertisement

Mysore; ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ: ಸಿದ್ದರಾಮಯ್ಯ ಎಚ್ಚರಿಕೆ

06:56 PM Apr 02, 2024 | Team Udayavani |

ಮೈಸೂರು: ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ. ನಮ್ಮ ಸಂವಿಧಾನದ ಸ್ವರೂಪ ಬದಲಾಯಿಸಿ ದೇಶದ ದುಡಿಯುವ ವರ್ಗಗಳಿಗೆ ವಂಚಿಸಿದರೆ ದೇಶದ ಪರಿಸ್ಥಿತಿ ಬಿಗಡಾಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ನೇರ ಎಚ್ಚರಿಸಿದರು.

Advertisement

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 45 ಕ್ಕೂ ಹೆಚ್ಚು ಮಂದಿ ಹೋಬಳಿ ಮಟ್ಟದ ಮುಖಂಡರುಗಳನ್ನು ಹಾಗೂ ಮಾಜಿ ಕೇಂದ್ರ ಸಚಿವ ಶ್ರೀನಿವಾಸ್ ಪ್ರಸಾದ್ ಅವರ ಆತ್ಮೀಯರು ಮತ್ತು ಸಂಬಂಧಿಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಮಾತನಾಡಿದರು.

ನಾನು ಮುಖ್ಯಮಂತ್ರಿ ಆಗಿರುವುದಕ್ಕೆ, ಮೋದಿ ಪ್ರಧಾನಮಂತ್ರಿ ಆಗಿರುವುದಕ್ಕೆ ನಮ್ಮ ಸಂವಿಧಾನ ಕಾರಣ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರತಿಪಾದಿಸಿದರು.

ಬಿಜೆಪಿ ನಮ್ಮ ಈ ಸಂವಿಧಾನ ಬದಲಾವಣೆಯ ಅಜೆಂಡಾ ಇಟ್ಟುಕೊಂಡಿದೆ. ಈ ಸಂವಿಧಾನ ಬದಲಾದರೆ ದೇಶದ ದಲಿತರು, ಶೂದ್ರರು, ಮಹಿಳೆಯರು ಮತ್ತು ಶ್ರಮಿಕ ವರ್ಗಗಳಿಗೆ ಉಳಿಗಾಲವಿಲ್ಲ. ಆದ್ದರಿಂದ ನಾವೆಲ್ಲಾ ಉಳಿಯಬೇಕಾದರೆ ಸಂವಿಧಾನ ಉಳಿಯಬೇಕು. ಸಂವಿಧಾನ ಉಳಿಯಬೇಕು ಎಂದರೆ ಬಿಜೆಪಿ ಸೋಲಬೇಕು ಎನ್ನುವ ಪಣ ತೊಡಿ ಎಂದರು.

ಮೋದಿ ಅವರ ಅವಧಿಯಲ್ಲಿ ಇಡೀ ದೇಶದಲ್ಲಿ ಸ್ಕಾಲರ್ ಶಿಪ್ ಗೆ ಯಾವ ಗತಿ ಆಯ್ತು ಅಂತ ನೋಡಿದ್ದೀರಲ್ಲಾ? ಮತ್ತೇಕೆ ಬಿಜೆಪಿ ಕಡೆ ಮುಖ ಮಾಡಬೇಕು ಎಂದು ಪ್ರಶ್ನಿಸಿದರು.

Advertisement

ಶೂದ್ರರಿಗೆ ಪ್ರವೇಶವೇ ಇಲ್ಲ: ಸಿ.ಎಂ. ಎಚ್ಚರಿಕೆ

ಶೂದ್ರರಿಗೆ ಬಿಜೆಪಿ-ಆರ್ ಎಸ್ಎಸ್ ನ ಗರ್ಭಗುಡಿಯೊಳಗೆ ಪ್ರವೇಶವೇ ಇಲ್ಲ. ಶೂದ್ರರು, ದಲಿತರನ್ನು ಕೇವಲ ಬಳಸಿಕೊಳ್ಳುತ್ತಾರೆ ಆದರೆ ಆರ್ಎಸ್ಎಸ್ ನ ಒಳಗೆ ಪ್ರವೇಶ ಕೊಡುವುದಿಲ್ಲ. ಆದ್ದರಿಂದ ಅದರ ಕಡೆಗೆ ತಲೆ ಕೂಡ ಹಾಕಬೇಡಿ ಎಂದು ಕರೆ ನೀಡಿದರು.

ದಲಿತರು, ಶೂದ್ರರು, ಹಿಂದುಳಿದವರ ವಿರೋಧಿಯಾದ ಬಿಜೆಪಿ-ಆರ್ ಎಸ್ಎಸ್ ಮೀಸಲಾತಿಯನ್ನೂ ವಿರೋಧಿಸುತ್ತದೆ. ಮಂಡಲ್ ವರದಿ ವೇಳೆ ಶೂದ್ರರು ಸಾವಿಗೆ ಕಾರಣರಾದವರು, ನಮ್ಮವರು ಬೆಂಕಿ ಹಚ್ಚಿಕೊಂಡು ಸಾಯುವಂತೆ ಮಾಡಿದವರು ಇವರೇ ತಾನೇ? ನಮ್ಮ ಶತ್ರುಗಳ ಜತೆಗೆ ಈ ದೇಶದ ಶೂದ್ರರು, ದಲಿತರು, ಹಿಂದುಳಿದವರು ಏಕೆ ಹೋಗಬೇಕು ಎಂದು ಪ್ರಶ್ನಿಸಿದರು.

ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಾನು ಹಿಂದುವಾಗಿ ಸಾಯುವುದಿಲ್ಲ ಎಂದು ಹೇಳಿ ಬೌದ್ದ ಧರ್ಮಕ್ಕೆ ಹೋಗಿದ್ದಕ್ಕೆ ಮುಖ್ಯ ಕಾರಣ ಜಾತಿ ಅಸಮಾನತೆ, ಮತ್ತು ಸಾಮಾಜಿಕ ಅಸಮಾನತೆಯೇ ಕಾರಣ ಎಂದರು.

ರಾಷ್ಟ್ರಮಟ್ಟದಲ್ಲೂ ನಮ್ಮ ಕಾರ್ಯಕ್ರಮ ಜಾರಿ

ಕೇಂದ್ರದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆಗಳು ಕಡಿಮೆ ಇದೆ. ನಾವು ಅಧಿಕಾರಕ್ಕೆ ಬಂದರೆ ನಾವು ರಾಜ್ಯದಲ್ಲಿ ತಂದಿರುವ ದಲಿತ ಮತ್ತು ಹಿಂದುಳಿದ ವರ್ಗಗಳ ಪರವಾದ ಕಾನೂನುಗಳನ್ನು ರಾಷ್ಟ್ರಮಟ್ಟದಲ್ಲೂ ಜಾರಿಗೆ ತರಲಾಗುವುದು. ಈ ಬಗ್ಗೆ ರಾಹುಲ್ ಗಾಂಧಿ ಅವರ ಜತೆಗೂ ಮಾತಾಡಿ ಪ್ರಣಾಳಿಕೆಯಲ್ಲಿ ಸೇರಿಸಲು ಹೇಳಿದ್ದೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next