Advertisement

ಕರ್ನಾಟಕದಲ್ಲಿ ನಿಮ್ಮ ಆಟ ನಡೆಯಲ್ಲ: ಬಿಜೆಪಿಗೆ ಸಿದ್ದರಾಮಯ್ಯ ಎಚ್ಚರಿಕೆ

11:59 AM Jun 16, 2022 | Team Udayavani |

ಬೆಂಗಳೂರು: ಕರ್ನಾಟಕದಲ್ಲಿ‌ ನಿಮ್ಮ ಆಟ ನಡೆಯುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.

Advertisement

ರಾಹುಲ್ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಕೆಪಿಸಿಸಿ ಕಚೇರಿ ಬಳಿ ಮುಂದುವರಿದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಬಿಜೆಪಿ ಪ್ರಜಾಪ್ರಭುತ್ವವನ್ನು ಬುಡಮೇಲು ಮಾಡುತ್ತಿದೆ. ಸಂವಿಧಾನದ ಆಶಯಗಳನ್ನು ಕಗ್ಗೊಲೆ ಮಾಡುತ್ತಿದೆ. ರಾಹುಲ್ ಗಾಂಧಿ ತಪ್ಪು ಮಾಡಿದ್ದರೆ ವಿಚಾರಣೆ ಮಾಡುವುದಕ್ಕೆ ನಮ್ಮ ವಿರೋಧವಿರಲಿಲ್ಲ. ಆದರೆ ರಾಜಕೀಯ ಕಾರಣಕ್ಕಾಗಿ ಅವರನ್ನು ಸತತ ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆಪಾದಿಸಿದರು.

ಇದನ್ನೂ ಓದಿ:ವಿಮಾನ ನಿಲ್ದಾಣ ಮಾದರಿಯಲ್ಲಿ 130 ವರ್ಷ ಹಳೆಯ ಯಶವಂತಪುರ ರೈಲ್ವೆ ನಿಲ್ದಾಣ ಮೇಲ್ದರ್ಜೆಗೆ

ಬಿಜೆಪಿಯ ಈ ನೀತಿಯನ್ನು ಖಂಡಿಸಿ ನಾಳೆಯಿಂದ ತಾಲೂಕು ಕೇಂದ್ರಗಳಲ್ಲೂ ಪ್ರತಿಭಟನೆ ಆರಂಭಿಸುತ್ತೇವೆ. ಎಲ್ಲ ಶಾಸಕರು, ಮಾಜಿ ಶಾಸಕರು ಭಾಗವಹಿಸುತ್ತಾರೆ ಎಂದು ಹೇಳಿದರು.

Advertisement

ಪ್ರತಿಭಟನೆ ಬಳಿಕ ಕಾಂಗ್ರೆಸ್ ನಾಯಕರು ಪಾದಯಾತ್ರೆಯಲ್ಲಿ ರಾಜಭವನಕ್ಕೆ ತೆರಳಿದರು. ರಾಜಭವನ ಚಲೋ ಸಂದರ್ಭದಲ್ಲಿ ಭಾರಿ ಪ್ರಮಾಣದಲ್ಲಿ ಸಂಚಾರ ಸಮಸ್ಯೆ ಸೃಷ್ಟಿಯಾಗಿದ್ದು, ಸಾರ್ವಜನಿಕರು ಹಿಡಿಶಾಪ ಹಾಕಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next