Advertisement

ದೆಹಲಿಗೆ ಹೊರಟ ಸಿದ್ದರಾಮಯ್ಯ: ಹೈಕಮಾಂಡ್ ಜೊತೆ ಮಹತ್ವದ ಚರ್ಚೆ

08:57 AM Oct 05, 2021 | Team Udayavani |

ಬೆಂಗಳೂರು: ರಾಜ್ಯ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ದೆಹಲಿಗೆ ಪ್ರಯಾಣ ಬೆಳೆಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮೂಲಕ ದೆಹಲಿಗೆ ಪ್ರಯಾಣಿಸಿದರು.

Advertisement

ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಕರೆ ಮಾಡಿದ್ದು, ದೆಹಲಿಗೆ ಆಗಮಿಸುವಂತೆ ಬುಲಾವ್ ನೀಡಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿ ನಡೆಯುತ್ತಿರುವ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆ ಟಿಕೆಟ್ ಹಂಚಿಕೆ ವಿಚಾರದ ಬಗ್ಗೆ ಚರ್ಚಿಸಲು ಹೈಕಮಾಂಡ್, ಸಿದ್ದರಾಮಯ್ಯರನ್ನು ದೆಹಲಿಗೆ ಬರುವಂತೆ ಬುಲಾವ್ ನೀಡಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ:ದಸರಾ ಬಳಿಕ ಎಲ್ಲ ತರಗತಿಯವರಿಗೂ ಬಿಸಿಯೂಟ

ಉಪ ಚುನಾವಣೆ, ಪಕ್ಷ ಸಂಘಟನೆ, ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತು ಸಿದ್ದರಾಮಯ್ಯ ದೆಹಲಿಯ ನಾಯಕರ ಬಳಿ ಚರ್ಚೆ ಮಾಡಲಿದ್ದಾರೆ. ಸಿದ್ದರಾಮಯ್ಯ ಭೇಟಿಯ ವೇಳೆ ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಯ ಅಭ್ಯರ್ಥಿಗಳ ಕುರಿತು ಪ್ರಮುಖವಾಗಿ ಚರ್ಚೆಯಾಗುವ ಸಾಧ್ಯತೆಯಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next