Advertisement

Siddaramaiah; ಯಾವಾಗ ಸಭೆ ನಡೆಸುತ್ತೀರಿ? ಯಾವಾಗ ಪರಿಹಾರ ನೀಡುತ್ತೀರಿ?

12:45 AM Feb 11, 2024 | Team Udayavani |

ಬೆಂಗಳೂರು: ಬರ ಪರಿಹಾರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳುಗಳಾಗಿವೆ. ಯಾವಾಗ ಸಭೆ ನಡೆಸುತ್ತೀರಿ? ಎಂದು ಪರಿಹಾರ ನೀಡುತ್ತೀರಿ? ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಪ್ರಶ್ನೆ ಮಾಡಿದ್ದಾರೆ.

Advertisement

ಅಮಿತ್‌ ಶಾ ರಾಜ್ಯ ಪ್ರವಾಸ ಹಿನ್ನೆಲೆಯಲ್ಲಿ ಪತ್ರಿಕಾ ಪ್ರಕಟನೆ ನೀಡಿ ಈ ಪ್ರಶ್ನೆ ಮುಂದಿಟ್ಟಿರುವ ಅವರು, ಕೇಂದ್ರ ತಜ್ಞರ ಸಮಿತಿ ಬಂದು ಅಧ್ಯಯನ ಮಾಡಿ ವರದಿ ಸಲ್ಲಿಸಿಯಾಗಿದೆ. ನಿಯಮಗಳ ಪ್ರಕಾರ ಕೇಂದ್ರ ಗೃಹಸಚಿವರ ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ತಜ್ಞರ ವರದಿಯನ್ನು ಪರಿಶೀಲಿಸಿ ಪರಿಹಾರಕ್ಕೆ ಅನುಮೋದನೆ ನೀಡಬೇಕು. ಇಂತಹದ್ದೊಂದು ಸಣ್ಣ ಸಭೆ ನಡೆಸಲು ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರಿಗೆ ಪುರುಸೊತ್ತಿಲ್ಲ. ಯಾವಾಗ ಬರ ಪರಿಹಾರ ನೀಡುತ್ತೀರಿ? ಕರ್ನಾಟಕಕ್ಕೆ ಕಾಲಿಡುವ ಮೊದಲು ಈ ಪ್ರಶ್ನೆಗೆ ಉತ್ತರಿಸಿ ಎಂದಿದ್ದಾರೆ.

ತಾರತಮ್ಯ ನೀತಿಯನ್ನು ಕನ್ನಡಿಗರಿಗೆ ತಿಳಿಸಲು ಕರ್ನಾಟಕಕ್ಕೆ ಬರುತ್ತಿದ್ದೀರಾ ಅಮಿತ್‌ ಶಾ ಅವರೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next