Advertisement
ಕಳೆದ ಒಂದು ವರ್ಷದಿಂದ ತಮ್ಮ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ವರುಣ ಮತ್ತು ಚಾಮುಂಡೇಶ್ವರಿ ಕ್ಷೇತ್ರಗಳ ಮೇಲುಸ್ತುವಾರಿ ವಹಿಸಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಮಾಡುವ ಮೂಲಕ 2 ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆಗೆ ಅವಕಾಶ ನೀಡಿದ್ದ ಸಿದ್ದರಾಮಯ್ಯ, ಚುನಾವಣೆ ಹತ್ತಿರವಾದಂತೆ ಇದೀಗ ಸ್ವತಃ ತಾವೇ ನೇರವಾಗಿ ಅಖಾಡಕ್ಕೆ ಇಳಿದಿದ್ದಾರೆ.
ಕಡೇ ಚುನಾವಣೆ, ಕೈಹಿಡಿಯಿರಿ ಎಂದು ಮನವಿ ಮಾಡಿದ್ದಾರೆ. ಮಂಗಳವಾರ ಮಧ್ಯಾಹ್ನ ವಿಶೇಷ ವಿಮಾನದ ಮೂಲಕ ಮೈಸೂರಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನೇರವಾಗಿ ತಮ್ಮ ಮನೆಗೆ ತೆರಳಿ ಚಾಮುಂಡೇಶ್ವರಿ ಕ್ಷೇತ್ರದ ಕೆಲ ಮುಖಂಡರ ಜತೆಗೆ ಮಾತುಕತೆ ನಡೆಸಿದರು. ಸಂಜೆ ಹೂಟಗಳ್ಳಿಯಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡ ನಂತರ ಜಿಪಂ ಸದಸ್ಯ ರಾಕೇಶ್ ಪಾಪಣ್ಣ ಸೇರಿದಂತೆ ಹಲವು ಮುಖಂಡರ
ಮನೆಗಳಿಗೆ ಭೇಟಿ ನೀಡಿ, ಮಾತುಕತೆ ನಡೆಸಿದರು.
Related Articles
Advertisement
2018ರಲ್ಲಿ ತನ್ನ ನೇತೃತ್ವದಲ್ಲೇ ಚುನಾವಣೆಗೆ ಹೋಗಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿರುವುದರಿಂದ ತನ್ನ ಜವಾಬ್ದಾರಿ ಹೆಚ್ಚಿದೆ ಎಂದು ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ತಡರಾತ್ರಿ ವರೆಗೆ ಸಭೆ ನಡೆಸಿದ್ದರಿಂದ ರಾತ್ರಿ ಟಿ.ಕಾಟೂರಿನ ತೋಟದ ಮನೆಯಲ್ಲೇ ವಾಸ್ತವ್ಯಹೂಡಿದ್ದ ಸಿದ್ದರಾಮಯ್ಯ, ಬೆಳಗ್ಗೆ ನಗರದ ತೊಣಚಿಕೊಪ್ಪಲು ಬಡಾವಣೆ ನಿವಾಸಕ್ಕೆ ಆಗಮಿಸಿಉಪಾಹಾರದ ನಂತರ ಜನರ ಅಹವಾಲು ಸ್ವೀಕರಿಸಿದರು. ಈ ವೇಳೆ ಕೆಪಿಸಿಸಿ ಕಾರ್ಯದರ್ಶಿ ಮಳವಳ್ಳಿ ಶಿವಣ್ಣ, ಸಚಿವ ಡಾ.ಎಚ್.ಮಹದೇವಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್, ಡಾ.ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು. ಗಿರೀಶ್ ಹುಣಸೂರು