Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಸುಳ್ಳು ಹೇಳುವುದರಲ್ಲಿ ನೊಬೆಲ್ ಪ್ರಶಸ್ತಿ ನೀಡಬೇಕು. ನಾನೆ ಐದು ವರ್ಷ ಸಿಎಂ ಅಂದರು. ವಿರೋಧ ವ್ಯಕ್ತವಾದಾಗ ಉಲ್ಟಾ ಹೊಡೆದರು. ಅವರು ಸಿದ್ದರಾಮಯ್ಯ ಅಲ್ಲ ಸುಳ್ಳುರಾಮಯ್ಯ. ಜಾತಿಗಣತಿ ವಿಚಾರದಲ್ಲೂ ಸುಳ್ಳು ಹೇಳಿದ್ದಾರೆ. ಹಿಂದೆ ವರದಿ ನೀಡಿದ್ದಾಗ ಸಿಎಂ ಆಗಿದ್ದಾಗಲೇ ಜಾರಿಗೆ ತರುವುದಾಗಿ ಹೇಳಿದ್ದರು. ಸ್ವಲ್ಪ ದಿನಗಳ ಹಿಂದೆ ಸಾಧು ಸಂತರು ಭೇಟಿಯಾದಾಗ ನವೆಂಬರ್ ನಲ್ಲಿ ಜಾರಿಗೆ ತರುವುದಾಗಿ ಹೇಳಿದ್ದರು. ಈಗ ಅದನ್ನು ಜಾರಿಗೆ ತರಲು ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ಸಾಧು ಸಂತರ ಶಾಪ ಸಿದ್ದರಾಮಯ್ಯಗೆ ತಟ್ಟುತ್ತದೆ. ದಲಿತರು ಹಿಂದುಳಿದ ವರ್ಗದವರ ಶಾಪವು ತಟ್ಟುತ್ತದೆ. ಸದ್ಯದಲ್ಲೇ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ. ತಿಂಗಳು – ವರ್ಷ ಅಲ್ಲ, ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ಹೇಳಿದ್ದಾರೆ.
Related Articles
Advertisement
ಬಿಜೆಪಿ ಅಪರೇಷನ್ ಕಮಲ ಆರೋಪ ವಿಚಾರಕ್ಕೆ ಮಾತನಾಡಿ, ಒಬ್ಬನೇ ಒಬ್ಬ ಕಾಂಗ್ರೆಸ್ ಶಾಸಕ ನನಗೆ 50 ಕೋಟಿ ಆಫರ್ ಬಿಜೆಪಿಯಿಂದ ಆಫರ್ ಯಾರು ಕೊಟ್ಟರು ಎಂದು ಹೇಳಿ ಬಿಡಲಿ. ಆಗ ಅದನ್ನು ನಾನು ಒಪ್ಪಿಕೊಳ್ಳುತ್ತೇನೆ. ಸುಳ್ಳು ಹೇಳಿ ಇಂತಹ ವಿಚಾರ ಹಬ್ಬಿಸುವುದು ಬೇಡ ಎಂದರು.
ಕಾಂಗ್ರೆಸ್ ಸರ್ಕಾರದಲ್ಲಿ ದಿನಕ್ಕೊಬ್ಬ ಅಜಿತ್ ಪವಾರ್ ಹುಟ್ಟಿ ಕೊಳ್ಳುತ್ತಿದ್ದಾರೆ ಸರ್ಕಾರ ಬೀಳುವ ದಿನಗಣನೆ ಈಗ ಆರಂಭವಾಗಿದೆ. ನಾನು ತಿಂಗಳು ವರ್ಷದ ಮಾತು ಆಡುತ್ತಿಲ್ಲ. ಕೆಲವೇ ದಿನಗಳಲ್ಲಿ ಸರ್ಕಾರ ಬೀಳಬಹುದು. ಸತೀಶ್ ಜಾರಕಿಹೊಳಿ, ಡಿ.ಕೆ ಶಿವಕುಮಾರ್, ಹರಿಪ್ರಸಾದ್, ಪರಮೇಶ್ವರ, ಪ್ರಿಯಾಂಕ ಖರ್ಗೆ ಎಲ್ಲಾ ಅಜಿತ್ ಪವಾರ್ ಗಳಾಗಿದ್ದಾರೆ. ಹೀಗಾಗಿ ಸರ್ಕಾರ ಬೀಳುವ ಲಕ್ಷಣ ಕಾಣುತ್ತಿದೆ. ಕಾಂಗ್ರೆಸ್ ನಲ್ಲಿ ಈಗ ಹಾದಿ ಬೀದಿಯಲ್ಲಿ ಹೋಗುವವರೆಲ್ಲಾ ಸಿಎಂ ಸ್ಥಾನ ಕೇಳುತ್ತಿದ್ದಾರೆ. ಪ್ರಿಯಾಂಕ ಖರ್ಗೆ ಅವರ ಅಪ್ಪನಿಗೆ ಸಿಎಂ ಸ್ಥಾನ ಕೇಳಿದ್ದರೆ ಅಪ್ಪನಿಗೆ ಸಿಎಂ ಸ್ಥಾನ ಕೇಳಿದ್ದರೆ ಮೆಚ್ಚಿಕೊಳ್ಳುತ್ತಿದೆ. ಅವರೇ ಕೇಳುತ್ತಿದ್ದಾರೆ, ಇದು ನಗಪಾಟಲಿಗೆ ವಿಚಾರ ಎಂದು ಕೆಎಸ್ ಈಶ್ವರಪ್ಪ ಟೀಕಿಸಿದರು.