Advertisement

Davanagere: ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ: ಶಾಮನೂರು

04:18 PM Sep 13, 2024 | Team Udayavani |

ದಾವಣಗೆರೆ: ಬಿಜೆಪಿಯ ಕೆಲವು ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬದಲಾಗುತ್ತಾರೆಂದು ತಿರುಕನ ಕನಸು ಕಾಣುತ್ತಿದ್ದಾರೆ. ಸಿದ್ದರಾಮಯ್ಯ (Siddaramaiah) ಉತ್ತಮ ಆಡಳಿತ ನೀಡುತ್ತಿದ್ದು ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಕಾಂಗ್ರೆಸ್‌ನ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ (Shamanuru Shivashankarappa) ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವುದರಿಂದಲೇ ಐದು ಗ್ಯಾರಂಟಿ ಯೋಜನೆಗಳನ್ನು ನೀಡಿದರೂ ರಾಜ್ಯದಲ್ಲಿ ಆರ್ಥಿಕ ಸಮತೋಲನವಿದ್ದು ಹಣಕಾಸು ಪರಿಸ್ಥಿತಿಯೂ ಉತ್ತಮವಾಗಿದೆ. ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಬಿಡುಗಡೆಯಾಗುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next