ಬೆಂಗಳೂರು: ಹಿಜಾಬ್ ಮತ್ತು ಸ್ವಾಮೀಜಿಗಳ ಕುರಿತ ಸಿದ್ದರಾಮಯ್ಯ ಕೊಟ್ಟ ಹೇಳಿಕೆಗೆ ಅವರೇ ಉತ್ತರ ಕೊಡುತ್ತಾರೆ. ಈಗಾಗಲೇ ಅವರು ಟ್ವೀಟ್ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಸಿದ್ದರಾಮಯ್ಯ ಹೇಳಿಕೆಯನ್ನು ಪಕ್ಷದ ಪರವಾಗಿ ಸಮರ್ಥನೆ ಮಾಡಿಕೊಳ್ಳಲು ಡಿಕೆ ಶಿವಕುಮಾರ್ ಹಿಂದೇಟು ಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರಿಗೆ ಎಲ್ಲ ಧರ್ಮ, ಸ್ವಾಮಿಗಳ ಮೇಲೆ ಗೌರವವಿದೆ. ಅವರು ಸಿಎಂ ಆಗಿದ್ದಾಗ ಎಲ್ಲ ಧರ್ಮಗಳಿಗೂ ಬೇಕಾದಷ್ಟು ಸಹಾಯ ಮಾಡಿದ್ದಾರೆ. ಅವರು ಮಾತಾನಾಡಿರುವುದಕ್ಕೆ ಅದಕ್ಕೆ ಅವರೇ ಉತ್ತರ ಕೊಡುತ್ತಾರೆ ಎಂದರು.
ಮಕ್ಕಳಿಗೆ ಮನವೊಲಿಸಬೇಕು: ವಿದ್ಯಾಭ್ಯಾಸ ಬಹಳ ಮುಖ್ಯ. ಹಿಜಾಬ್ ವಿಚಾರದಲ್ಲಿ ಮಕ್ಕಳನ್ನು ತಂದೆತಾಯಿಗಳು, ಗುರುಗಳು ಮನವೊಲಿಸಬೇಕು. ಗುರುಗಳು ಹೇಳಿದರೆ ಮಕ್ಕಳು ಕೇಳುತ್ತಾರೆ ಡಿಕೆ ಶಿವಕುಮಾರ್ ಹೇಳಿದರು.
ಇದನ್ನೂ ಓದಿ:ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಿಲ್ಲ : ಸಿದ್ದರಾಮಯ್ಯಗೆ ಬಿಜೆಪಿ ಟಾಂಗ್
ಕಾಂಗ್ರೆಸ್ ಪಕ್ಷ ಸಂವಿಧಾನದಲ್ಲಿ ಇರುವ ವಿಚಾರಗಳಿಗೆ ಬೆಲೆ ಕೊಡುತ್ತದೆ. ಸಂವಿಧಾನದಲ್ಲಿ ಇರುವ ವಿಚಾರಗಳೇ ನಮ್ಮ ಬೈಬಲ್, ನಮ್ಮ ಕುರಾನ್, ನಮ್ಮ ಭಗವದ್ಗೀತೆ. ಈಗ ನ್ಯಾಯಾಲಯ ಒಂದು ತೀರ್ಮಾನ ಕೊಟ್ಟಿದೆ. ಕೆಲವರು ಅದನ್ನು ಒಪ್ತಾರೆ,ಕೆಲವರು ಒಪ್ಪಲ್ಲ. ಈ ಕೋರ್ಟ್ ತೀರ್ಪಿನ ಮೇಲೆ ಸುಪ್ರೀಂ ಕೋರ್ಟ್ ಗೂ ಹೋಗಲು ಅವಕಾಶವಿದೆ. ಆದರೆ ನ್ಯಾಯಾಲಯದ ತೀರ್ಪನ್ನು ಸರಿಯಲ್ಲವೆಂದು ಹೇಳುವುದಿಲ್ಲ ಎಂದರು.