Advertisement
ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ಅವರು ಎರಡೂವರೆ ವರ್ಷದ ನಂತರ ಮುಖ್ಯಮಂತ್ರಿ ಸ್ಥಾನವನ್ನು ಡಿ.ಕೆ. ಶಿವಕುಮಾರ್ ಅವರಿಗೆ ಬಿಟ್ಟು ಕೊಡಬೇಕೆಂಬ ಮಾತುಕತೆ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಆಗಿದೆ ಎಂಬ ಮಾಹಿತಿಯಿದ್ದು ಅದು ಕಾಂಗ್ರೆಸ್ ನ ಆಂತರಿಕ ವಿಚಾರ. ಆದರೆ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸ್ಥಾನವನ್ನು ಬಿಟ್ಟು ಕೊಡದ ರೀತಿಯಲ್ಲಿ ಸಿದ್ದರಾಮಯ್ಯ ಅವರು ಈಗಾಗಲೇ ನಾಲ್ವರನ್ನು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ಧಪಡಿಸಿದ್ದು ಅವರವರ ನಡುವೆ ಜಗಳ ಹಚ್ಚುವ ಮೂಲಕ ಮುಂದೆ ತಾವೇ ಮುಖ್ಯಮಂತ್ರಿ ಆಗಿ ಮುಂದುವರೆಯುವ ಯೋಜನೆ ರೂಪಿಸಿದ್ದಾರೆ ಎಂದು ಬೆಲ್ಲದ ಆರೋಪಿಸಿದರು.
Related Articles
Advertisement
ವಿಧಾನ ಮಂಡಲ ಅಧಿವೇಶನದಲ್ಲಿ ವಿರೋಧ ಪಕ್ಷವಾಗಿ ನಾವು ಸರ್ಕಾರದ ವಿರುದ್ಧ ಟೀಕಾಸ್ತ್ರ ಹಾಗೂ ಸರ್ಕಾರವನ್ನು ಸಮರ್ಥವಾಗಿ ಕಟ್ಟಿ ಹಾಕುವಲ್ಲಿ ಯಶಸ್ವಿಯಾಗಿದ್ದೇವೆ ಎಂದರು.
ಲೋಕಸಭೆ ಚುನಾವಣೆ ಒಳಗಾಗಿ ರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ ಪಕ್ಷದ ಹೈಕಮಾಂಡ್ ನಾಯಕರು ಈ ನಿಟ್ಟಿನಲ್ಲಿ ಸಮರ್ಪಕ ನಿರ್ಧಾರ ಕೈಗೊಳ್ಳಲಿದ್ದಾರೆ. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಬೇರೆ ಪಕ್ಷದವರು ಜೆಡಿಎಸ್ ಬಿಜೆಪಿ ನಡುವಿನ ಮೈತ್ರಿ ವಿಚಾರ ಇನ್ನು ಚರ್ಚೆ ಹಂತದಲ್ಲಿದೆ ನಮ್ಮ ಪಕ್ಷದಿಂದ 66 ಜನ ಶಾಸಕರಿದ್ದು ನಮ್ಮ ಪಕ್ಷದವರೇ ವಿಧಾನಸಭೆ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಅಲಂಕರಿಸಲಿದ್ದಾರೆ ಎಂದು ಹೇಳುವ ಮೂಲಕ ಎಚ್ ಡಿ ಕುಮಾರಸ್ವಾಮಿ ಅವರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸ್ಥಾನ ನೀಡಲಾಗುತ್ತಿದೆ ಎಂಬ ಅನಿಸಿಕೆಯನ್ನು ಪರೋಕ್ಷವಾಗಿ ತಳ್ಳಿ ಹಾಕಿದರು.
ಪಕ್ಷದ ಹೈಕಮಾಂಡ್ ರಾಜ್ಯದ ಮೂವರು ನಾಯಕರನ್ನು ದೆಹಲಿಗೆ ಕರೆಸಿಕೊಂಡಿರುವ ವಿಷಯಕ್ಕೆ ಕುರಿತಂತೆ ಇದೊಂದು ಪಕ್ಷದೊಳಗಿನ ಸಹಜ ಪ್ರಕ್ರಿಯೆ ಪಕ್ಷದ ಸಂಘಟನೆ ಇತ್ಯಾದಿ ವಿಚಾರಗಳ ಕುರಿತಾಗಿ ಚರ್ಚೆಗೆ ಆಹ್ವಾನಿಸಿರಬಹುದು ಎಂದು ನುಡಿದರು.
ಎಫ್ ಡಿ ಸಿ ಪರೀಕ್ಷಾ ಅಕ್ರಮ ಕುರಿತಾಗಿ ಪ್ರತಿಕ್ರಿಯಿಸಿದ ಅವರು ಈ ಹಿಂದೆ ಪರೀಕ್ಷಾ ಅಕ್ರಮ ನಡೆದಾಗ ನಮ್ಮ ಸರ್ಕಾರ ತಪ್ಪಿತಸ್ಥರನ್ನು ಬಂಧಿಸಿ ಜೈಲಿಗೆ ಕಳುಹಿಸಿತು ಇದೀಗ ಅದೇ ಆರೋಪಿಗಳು ಮತ್ತೆ ಅದೇ ಪರೀಕ್ಷಾ ಅಕ್ರಮದಲ್ಲಿ ತೊಡಗಿಕೊಳ್ಳುತ್ತಾರೆಂದರೆ ಅವರಿಗೆಷ್ಟು ಧೈರ್ಯ ಇರಬಹುದು, ಬ್ಲೂಟೂತ್ ಅನ್ನು ಬಳಸಿ ಪರೀಕ್ಷಾ ಅಕ್ರಮ ನೋಡಿದರೆ ತಂತ್ರಜ್ಞಾನವನ್ನು ಹೀಗೂ ಬಳಸಬಹುದೇ ಎನ್ನುವಂತಾಗಿದೆ. ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೆ ಇಂತಹ ಪ್ರಕರಣಗಳು ಮರು ಕಳಿಸುತ್ತಿರಲಿಲ್ಲ ಎಂದು ನುಡಿದರು.