Advertisement
ಈ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಅವರಿಗೆ ಪತ್ರ ಬರೆದಿರುವ ಅವರು, ಹೊಸ ಶಿಕ್ಷಣ ನೀತಿ ಕುರಿತಾದ ಚರ್ಚೆಯಲ್ಲಿ ತಾವು ಭಾಗವಹಿಸುವುದಿಲ್ಲ ಎಂದಿದ್ದಾರೆ.
Related Articles
Advertisement
ಹೊಸ ಶಿಕ್ಷಣ ನೀತಿಯ ಹೇರಿಕೆಯು ಹಲವು ಸಮಸ್ಯೆಗಳನ್ನು ಒಳಗೊಂಡಿದೆ ಎಂದು ಹೇಳುತ್ತಿದೆ. ಒಕ್ಕೂಟ ವ್ಯವಸ್ಥೆಯ ಮೂಲ ಸ್ಫೂರ್ತಿಯ ನಿರಾಕರಣೆ, ಖಾಸಗೀಕರಣ, ತರಗತಿಗಳನ್ನು ನಿರಾಕರಿಸಿ ಕಾಲೇಜು, ವಿಶ್ವ ವಿದ್ಯಾಲಯಗಳ ಪಾವಿತ್ರ್ಯದ ನಿರಾಕರಣೆ, ಬಡವರು, ಹಿಂದುಳಿದವರು, ದಮನಿತರ ಸಿಗಬಹುದಾದ ಸುಲಭ ಶಿಕ್ಷ,ಣದ ನಿರಾಕರಣೆ, ಕೋಮು ಅಜೆಂಡಾಗಳನ್ನು ತಂದು ಅವೈಜ್ಞಾನಿಕತೆಯನ್ನು, ದ್ವೇಷವನ್ನು ತುಂಬಿ ಭಾರತವನ್ನು ಶಾಶ್ವತ ಅಂಧಕಾರಕ್ಕೆ ತಳ್ಳಲಾಗುತ್ತಿದೆ ಮುಂತಾದ ಗಂಭೀರ ಆರೋಪಗಳಿವೆ. ಸರ್ಕಾರ ಈ ಎಲ್ಲದರ ಕುರಿತು ಚರ್ಚೆ ನಡೆಸಬೇಕಾಗಿತ್ತು. ಇದೇನನ್ನೂ ನೀವು ಮಾಡಿಲ್ಲ. ನನ್ನ, ನಿಮ್ಮ ಆಯಸ್ಸು, ರಾಜಕೀಯ ವೃತ್ತಿ ಎಲ್ಲವೂ ಮುಂದೆಂದೊ ಒಂದು ದಿನ ಮುಗಿಯುತ್ತದೆ. ಆದರೆ ಶಿಕ್ಷಣ ನೀತಿಯ ಹೆಸರಲ್ಲಿ ಬಲಿಪಶುಗಳಾಗುವ ಮಕ್ಕಳ ಮುಂದೆ 70- 80 ವರ್ಷಗಳ ಭವಿಷ್ಯವಿದೆ. ಶಿಕ್ಷಣದ ಹಂತದಲ್ಲಿ ಅವರ ಭವಿಷ್ಯ ಅಲ್ಲೋಲ, ಕಲ್ಲೋಲವಾದರೆ. ಅದರ ಶಾಪವನ್ನು ಹೊರುವವರು ಯಾರು? ಈ ನಾಡಿನ, ರೈತರ, ಪಶುಪಾಲಕರ, ಕುಶಲಕರ್ಮಿಗಳ, ಸಣ್ಣ ಪುಟ್ಟ ವ್ಯಾಪಾರಿಗಳ, ಕಾರ್ಮಿಕರ ಮನೆಗಳಿಂದ ಬಂದ ಮಕ್ಕಳು ಗುಣ ಮಟ್ಟದ ಶಿಕ್ಷಣ ಪಡೆದು ಜಾಗತಿಕ ಮಟ್ಟದ ಉದಾರ ಮಾನವತಾವಾದಿ, ವೈಜ್ಞಾನಿಕ ಶಿಕ್ಷಣ ಪಡೆಯಬಾರದೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ತಾವು ನಿಜವಾಗಿಯೂ ನೈಜ ಸ್ಫೂರ್ತಿಯಲ್ಲಿ ಚರ್ಚೆಮಾಡಬಯಸಿದರೆ, ಕೂಡಲೆ ಈ ಹೊಸ ಶಿಕ್ಷಣ ನೀತಿಯನ್ನು ಹಿಂದಕ್ಕೆ ಪಡೆಯಿರಿ. ಚರ್ಚೆ ನಡೆಸಿದ ಮೇಲೆ ನಿಜವಾಗಿಯೂ ಈ ನೀತಿ ಆರೋಗ್ಯಕರವೆನ್ನಿಸಿ ಅನುಷ್ಠಾನ ಸೂಕ್ತವೆನ್ನಿಸಿದರೆ, ಈ ಶತಮಾನಕ್ಕೆ ಅತ್ಯಗತ್ಯ ಎನ್ನಿಸಿದರೆ ನಾವೆ ನಿಂತು ಅನುಷ್ಠಾನ ಮಾಡಲು ಬೆಂಬಲಿಸುತ್ತೇವೆ. ಇಲ್ಲದಿದ್ದರೆ ಮಕ್ಕಳ ಭವಿಷ್ಯದ ಕುತ್ತಿಗೆ ಕೊಯ್ಯುವಂಥ ಪಾಪದ ಕೆಲಸದಲ್ಲಿ ಭಾಗಿಯಾದೆವು ಎಂಬ ಪಶ್ಚಾತ್ತಾಪವನ್ನು ಹೊರಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ಎಚ್ಚರಿಸಿದ್ದಾರೆ.