Advertisement

ಸಾಲ ಮನ್ನಾ: ಪ್ರಧಾನಿಗೆ ಸಿಎಂ ಪತ್ರ

10:40 AM Mar 03, 2017 | |

ಬೆಂಗಳೂರು: ರಾಜ್ಯದಲ್ಲಿ ಬರ ಹಿನ್ನೆಲೆಯಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಸಾಲ ಮನ್ನಾ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತೂಮ್ಮೆ ಪತ್ರ ಬರೆದಿದ್ದಾರೆ.

Advertisement

ರಾಜ್ಯದಲ್ಲಿ ಈ ವರ್ಷ 160 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ. ತೀವ್ರ ಬರದ ಹಿನ್ನೆಲೆಯಲ್ಲಿ ರೈತರು ಸಂಕಷ್ಟದಲ್ಲಿದ್ದು ಬ್ಯಾಂಕ್‌ಗಳಿಂದ ಪಡೆದ ಸಾಲ ಮರು ಪಾವತಿ ಮಾಡಲಾಗದೇ ಸಮಸ್ಯೆ ಎದುರಿಸುತ್ತಿದ್ದಾರೆ.

ರಾಜ್ಯದಲ್ಲಿ 55 ಲಕ್ಷ 79 ಸಾವಿರ ರೈತರು ವಿವಿಧ ಬ್ಯಾಂಕ್‌ಗಳಿಂದ ಸಾಲ ಪಡೆದಿದ್ದು, ಶೇಕಡಾ 80.5% ರಷ್ಟು ರೈತರು ರಾಷ್ಟ್ರೀಕೃತ ವಾಣಿಜ್ಯ ಬ್ಯಾಂಕುಗಳಿಂದ ಸಾಲ ಪಡೆದಿದ್ದು, ಶೇಕಡಾ 19.95% ರಷ್ಟು ರೈತರು ಮಾತ್ರ ಸಹಕಾರ ಬ್ಯಾಂಕ್‌ಗಳಿಂದ ಸಾಲ ಪಡೆದಿದ್ದಾರೆ.

ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್‌ ಗಳಿಂದ ರೈತರು ಪಡೆದ ಸಾಲದ ಶೇಕಡಾ 50 % ಸಾಲ ಮನ್ನಾ ಮಾಡಿದರೆ, ರಾಜ್ಯ ಸರ್ಕಾರ ಸಹಕಾರಿ ಬ್ಯಾಂಕ್‌ಗಳಿಂದ ಪಡೆದ ಸಾಲದ ಶೇಕಡಾ 50 ರಷ್ಟು ಸಾಲ ಮನ್ನಾ ಮಾಡಲು ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next