Advertisement
ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಮೇಕೆದಾಟು ಕುರಿತಂತೆ ನಿಡಿರುವ ಹೇಳಿಕೆಯನ್ನು ಖಂಡಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಧಾನ ಮಂತ್ರಿ ಅವರಿಗೆ ಬರೆದಿರುವ ಪತ್ರದ ಸಾರಾಂಶ ಇಲ್ಲಿದೆ.
Related Articles
Advertisement
ಬೆಂಗಳೂರು ನಗರದ ಜನಸಂಖ್ಯೆ 1.5 ಕೋಟಿ ದಾಟಿದೆ. ಉಳಿದ 12 ಜಿಲ್ಲೆಗಳ 3.5 ಕೋಟಿ ಜನರ ವ್ಯಾಪ್ತಿಯಲ್ಲಿ ಕಾವೇರಿ ನೀರು ವಿತರಣೆಯಾಗುತ್ತಿದೆ. ದೇಶದ ಒಟ್ಟು ಆರ್ಥಿಕತೆ ಮತ್ತು ದೇಶದ ಒಟ್ಟು ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಿರುವ ಬೆಂಗಳೂರು ನಗರದ ಶೇ 30 ರಷ್ಟು ಮಂದಿಗೆ ಮಾತ್ರ ಕಾವೇರಿ ಕುಡಿಯುವ ನೀರಿನ ಲಭ್ಯತೆ ಇದೆ. ಬೇಸಿಗೆ ಮತ್ತು ಬರಗಾಲದ ಸ್ಥಿತಿಯಲ್ಲಿ ಬೆಂಗಳೂರು ನಗರಿಗರಿಗೆ ಕುಡಿಯುವ ನೀರಿನ ಅಭಾವ ಬಹಳ ಸಂಕಷ್ಟ ಸೃಷ್ಟಿಸಿದೆ. ಈ ಸಂಕಷ್ಟವನ್ನು ಪರಿಹರಿಸಲು ಮೇಕೆದಾಟು ಯೋಜನೆ ಜಾರಿ ಆಗುವುದು ಅತ್ಯಗತ್ಯ ಮತ್ತು ಮುಂದಿನ 50 ವರ್ಷಗಳ ನೀರಿನ ಅಗತ್ಯವನ್ನು ಈ ಯೋಜನೆ ಪೂರೈಸುತ್ತದೆ.
ಇಷ್ಟು ಮಹತ್ವದ ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ಕೊಡದೆ ಸತಾಯಿಸುತ್ತಿರುವುದಲ್ಲದೆ ಸಚಿವ ಶೇಖಾವತ್ ಅವರು ನಮ್ಮ ಕುಡಿಯುವ ನೀರಿನ ಮಹತ್ವವನ್ನು ಅರಿಯದೆ ಅತ್ಯಂತ ನಿರ್ಲಕ್ಷ್ಯತನದಿಂದ ಮಾತನಾಡಿರುವುದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಈ ಕೂಡಲೇ ಕೇಂದ್ರ ಸರ್ಕಾರ ಕಾಲಹರಣ ಮಾಡದೆ ತಕ್ಷಣ ಪರಿಸರ ಅನುಮತಿ ಕೊಡಬೇಕು. ಇಲ್ಲದ ನೆಪಗಳನ್ನು ಹೇಳಿಕೊಂಡು ರಾಜಕಾರಣ ಮಾಡದೆ ಮೇಕೆದಾಟು ಯೋಜನೆ ಜಾರಿ ಆಗಿ ಕೆಲಸ ಆರಂಭಿಸಬೇಕು ಎಂದು ಒತ್ತಾಯಿಸುತ್ತೇನೆ ಎಂದು ಸಿದ್ದರಾಮಯ್ಯನವರು ಪತ್ರದಲ್ಲಿ ಬರೆದಿದ್ದಾರೆ.