ರಾಯಚೂರು: ಸಿದ್ದರಾಮಯ್ಯ ಆಧಾರ ರಹಿತವಾಗಿ ಮಾತನಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ದೂರಿದರು.
ಮಸ್ಕಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಯಾವುದನ್ನು ಹೇಳುತ್ತಾರೊ ಅದನ್ನು ಮಾಡುತ್ತಾರೆ. ಕೊಟ್ಟ ಮಾತು ಉಳಿಸಿಕೊಳ್ಳುತ್ತಿದ್ದಾರೆ ಎಂದರು.
ಮಸ್ಕಿ ಚುನಾವಣೆಯ ಮುನ್ನ ನೀರಾವರಿಯ ಎಲ್ಲಾ ಯೋಜನೆಗಳ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. 5 A ಕಾಲುವೆ ಹೋರಾಟಗಾರರೊಂದಿಗೆ ಚರ್ಚಿಸಲಾಗುವುದು. ಕರ್ನಾಟಕದ 5808 ಗ್ರಾಮ ಪಂಚಾಯತ್ ಯಲ್ಲಿ ಶೇ.50 ರಷ್ಟು ಬಿಜೆಪಿ ಬೆಂಬಲಿತರು ಆಯ್ಕೆಯಾಗಬೇಕು ಎಂದರು.
ಇದನ್ನೂ ಓದಿ:ನಾನು ಡಿಸಿಎಂ ಆಗಬೇಕೆನ್ನುವುದು ಜನರ ಆಸೆ: ಬಹಿರಂಗವಾಗಿಯೇ ಬೇಡಿಕೆಯಿಟ್ಟ ಶ್ರೀರಾಮುಲು
ಮಸ್ಕಿಯಲ್ಲಿ ಈಗ ಗ್ರಾಮಸ್ವರಾಜ್ ಸಮಾವೇಶ ನಡೆಸಲಾಗುತ್ತಿದೆ. ಹಳ್ಳಿಯಿಂದ ದಿಲ್ಲಿವರೆಗೆ ಬಿಜೆಪಿ ಕಾರ್ಯಕರ್ತರನ್ನು ಹುರಿದುಂಬಿಸಲು ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇಂದು ನಾಳೆಯೊಳಗೆ ಉಪಚುನಾವಣೆ ಘೋಷಣೆಯಾಗುವ ಸಾಧ್ಯತೆಗಳಿವೆ ಎಂದರು.