ಬೆಂಗಳೂರು: ಬಿಜೆಪಿ ಸರಕಾರ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದು ಸಾಲದ ಕೂಪಕ್ಕೆ ತಳ್ಳಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.
ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿ, ಡಬಲ್ ಎಂಜಿನ್ ಸರಕಾರ ಎಂದು ಹೇಳಿಕೊಂಡರೆ ಪ್ರಯೋಜನವಿಲ್ಲ. ಕೇಂದ್ರ ಸರಕಾರದಿಂದಲೂ ರಾಜ್ಯಕ್ಕೆ ಮಹಾದ್ರೋಹವಾಗಿದೆ. ತೆರಿಗೆಯ ಪಾಲು, ಅನುದಾನ ಕಡಿಮೆಯಾಗಿದೆ ಎಂದು ಆರೋಪಿಸಿದರು.
ಕಳೆದ ಬಜೆಟ್‌ನಲ್ಲಿ ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ರೂ. ನಿಗದಿ ಮಾಡಿದ್ದೀರಿ, ಆದರೆ, ಈ ಬಜೆಟ್‌ನಲ್ಲಿ ಅದರ ಪ್ರಸ್ತಾವವೇ ಇಲ್ಲ. ರಾಜ್ಯ ಸರಕಾರ ಸಲ್ಲಿಸಿರುವ ಡಿಪಿಆರ್ ಅನ್ನು ಕಾವೇರಿ ನೀರು ನಿರ್ವಹಣ ಪ್ರಾಧಿಕಾರ ಅಂಗೀಕಾರ ಮಾಡಿಲ್ಲ ಎಂದು ಕೇಂದ್ರ ಸಚಿವರೇ ಲೋಕಸಭೆಯಲ್ಲಿ ಹೇಳಿದ್ದಾರೆ ಎಂದು ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡು. ಭದ್ರಾ ಮೇಲ್ದಂಡೆಗೆ 5300 ಕೋಟಿ ರೂ. ಅನುದಾನ ನೀಡಿರುವುದಾಗಿ ತೋರಿಸಿದ್ದಾರೆ ಆದರೆ, ರಾಷ್ಟ್ರೀಯ ಯೋಜನೆ ಎಂದು ಇನ್ನೂ ಘೋಷಣೆ ಮಾಡಿಲ್ಲ.
ಎತ್ತಿನಹೊಳೆ ಯೋಜನೆ ಬಗ್ಗೆ ಸಿಡಬ್ಲೂéಸಿ ಕೇಳಿದ ಮಾಹಿತಿ ರಾಜ್ಯ ಸರ್ಕಾರ ನೀಡಿಲ್ಲ. ರಾಜ್ಯ ಸರ್ಕಾರ ನಿದ್ದೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯಾರದು ಸುಳ್ಳು?
ಸಾಲದ ಬಗ್ಗೆ ಕೇಂದ್ರ ಸರಕಾರ ನೀಡಿರುವ ಅಂಕಿ ಅಂಶಕ್ಕೂ ರಾಜ್ಯ ಸರಕಾರ ಬಜೆಟ್‌ನಲ್ಲಿ ನೀಡಿರುವ ಅಂಕಿ ಅಂಶಗಳಲ್ಲಿ ವ್ಯತ್ಯಾಸ ಇದೆ. ಮಾರ್ಚ್ ಅಂತ್ಯದ ವೇಳೆಗೆ ರಾಜ್ಯದ ಸಾಲ 6.18 ಲಕ್ಷ ಕೋಟಿ ರೂ. ಆಗುತ್ತದೆ ಎಂದು ಕೇಂದ್ರ ಹೇಳಿದೆ. ಆದರೆ, ಬಜೆಟ್ ಪುಸ್ತಕದಲ್ಲಿ 5.64 64 ಸಾವಿರ ಕೋಟಿ ರೂ.ಐ ಆಗುತ್ತದೆ ಎಂದಿದ್ದಾರೆ. ಇವೆರಡರ ನಡುವಿನ ವ್ಯತ್ಯಾಸ 53,472 ಕೋಟಿ ರೂ. ಇಬ್ಬರಲ್ಲಿ ಯಾರು ಸುಳ್ಳು ಮಾಹಿತಿ ನೀಡಿದ್ದಾರೆ ಗೊತ್ತಿಲ್ಲ ಎಂದರು.