Advertisement

ಸಚಿವರಾಗಲು ಸಿದ್ದರಾಮಯ್ಯ ಪ್ರಮಾಣಪತ್ರ ಅಗತ್ಯವಿಲ್ಲ: ಸಚಿವ ಸುಧಾಕರ್‌

09:01 PM Jan 27, 2023 | Team Udayavani |

ಚಿಕ್ಕಬಳ್ಳಾಪುರ: ತಾವು ಸಚಿವರಾಗಬೇಕೇ ಬೇಡವೇ ಎಂಬುದನ್ನು ನಿರ್ಧರಿಸುವುದು ರಾಜ್ಯದ ಜನತೆ ಮತ್ತು ನಮ್ಮ ಪಕ್ಷದ ಸರ್ಕಾರವೇ ಹೊರತು ಸಿದ್ದರಾಮಯ್ಯ ಅಲ್ಲ, ತಮ್ಮ ಅರ್ಹತೆ ಬಗ್ಗೆ ಸಿದ್ದರಾಮಯ್ಯನವರ ಪ್ರಮಾಣ ಪತ್ರ ಅಗತ್ಯವಿಲ್ಲ ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ತಿರುಗೇಟು ನೀಡಿದರು.

Advertisement

ಸುದ್ದಿಗಾರರ ಜತೆ ಮಾತನಾಡಿ, ಸಿದ್ದರಾಮಯ್ಯ ಹೇಳಿದ ಕಾರಣಕ್ಕೆ ತಮ್ಮನ್ನು ಸಚಿವರನ್ನಾಗಿ ಮಾಡಿಲ್ಲ, ನಮ್ಮ ಪಕ್ಷದ ಸರ್ಕಾರ, ನಮ್ಮ ಮುಖ್ಯಮಂತ್ರಿ ಮತ್ತು ಈ ರಾಜ್ಯದ ಜನತೆ ತಮ್ಮನ್ನು ಸಚಿವರನ್ನಾಗಿ ಮಾಡಿದ್ದಾರೆ. ಜನತಾದಳದಲ್ಲಿದ್ದಾಗ ಯಾಕೆ ಇವರನ್ನು ಮುಖ್ಯಮಂತ್ರಿ ಮಾಡಲಿಲ್ಲ ಎಂದು ಪ್ರಶ್ನಿಸಿದರು.
ಬಾಯಿ ಚಪಲಕ್ಕೆ ಮಾತನಾಡುವುದು ಸರಿಯಲ್ಲ, ಬೀದರ್‌ ನಿಂದ ಕೆಜಿಎಫ್‌ವರೆಗೂ ತಮ್ಮ ಖಾತೆ ನಿರ್ವಹಣೆ ಬಗ್ಗೆ ಜನರು ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.

ತಾವು ಸಚಿವ ಸ್ಥಾನಕ್ಕೆ ಲಾಯಕ್ಕಾ? ಅಲ್ಲವಾ ಎಂಬುದನ್ನು ಜನರು ನಿರ್ಧಾರ ಮಾಡುತ್ತಾರೆ. ಅವರ ಸರ್ಟಿಫಿಕೆಟ್‌ ಬೇಕಾಗಿಲ್ಲ ಎಂದು ಸಿಡಿಮಿಡಿಗೊಂಡರು.

ನೆಕ್ಸ್ಟ್ ಪರೀಕ್ಷೆ ತೇರ್ಗಡೆಯಾದರೆ ವೈದ್ಯರಿಗೆ ಅವಕಾಶ: ವಿದೇಶದಲ್ಲಿ ಎಂಬಿಬಿಎಸ್‌ ಮಾಡಿದವರು ರಾಜ್ಯದಲ್ಲಿ ಸೇವೆ ಒದಗಿಸಲು ನೆಕ್ಸ್ಟ್ ಪರೀಕ್ಷೆ ತೇರ್ಗಡೆಯಾದರೆ ಮಾತ್ರ ಅವಕಾಶ ಎಂದು ಸಚಿವ ಸುಧಾಕರ್‌ ಹೇಳಿದರು.

ಎನ್‌ಎಂಸಿ ಗೈಡ್‌ ಲೈನ್ಸ್‌ ನಂತೆ ಪರೀಕ್ಷೆ ತೇರ್ಗಡೆಯಾದರೆ ಮಾತ್ರ ಭಾರತದಲ್ಲಿ ಸೇವೆ ಒದಗಿಸುವ ಜೊತೆಗೆ ಸರ್ಕಾರಿ ವೈದ್ಯರಾಗಲು ಅರ್ಹರಿರುತ್ತಾರೆ. ಇದು ರಾಜ್ಯಕ್ಕೆ ಸಂಬಂಧಿಸಿದ ವಿಷಯವಲ್ಲ ಬದಲಿಗೆ ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ ವಿಚಾರವಾಗಿದೆ ಎಂದು ಸ್ಪಷ್ಟಪಡಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next