ಬೆಂಗಳೂರು: ಮಾಜಿ ಮುಖ್ಯಮಂತ್ರಿ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸೋಮವಾರ ಬಾದಾಮಿಯಲ್ಲಿ ಸಮಸ್ಯೆ ಹೇಳಲು ಬಂದ ಗ್ರಾಮ ಪಂಚಾಯತ್ ಸದಸ್ಯರೊಬ್ಬರನ್ನು ಅವಮಾನಿಸಿ ವೇದಿಕೆಯಿಂದ ಕೆಳಗಿಳಿಸಿರುವುದು ಅತ್ಯಂತ ತಳಮಟ್ಟದ ವರ್ತನೆ ಎಂದು ಭಾರತೀಯ ಜನತಾ ಪಕ್ಷದ ರಾಜ್ಯ ವಕ್ತಾರ ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಟೀಕಿಸಿದ್ದಾರೆ.
“ಯಾರೂ ಹಳ್ಳಿ ಕಡೆಗೆ ಬಂದಿಲ್ಲ; ಆಶ್ರಯ ಮನೆಗಳು ಹಾಳಾಗಿ ಹೋಗಿವೆ. ಸಿದ್ದರಾಮಯ್ಯ ಬಂದು ಹೋದ್ರೂ ಕಾಮಗಾರಿ ಸರಿಯಾಗಿಲ್ಲ” ಎಂದು ತಿಳಿಸುತ್ತಿದ್ದ ಬಾದಾಮಿಯ ನೂತನ ಗ್ರಾಮ ಪಂಚಾಯತ್ ಸದಸ್ಯ ಸಂಗಣ್ಣ ಜಾಬಣ್ಣನವರನ್ನು ಸಿದ್ದರಾಮಯ್ಯ ಅವರು ದೂಡಿದ್ದಾರೆ ಎಂಬ ಮಾಧ್ಯಮ ವರದಿಗಳು ಮತ್ತು ಸಾಮಾಜಿಕ ಜಾಲತಾಣದ ಪ್ರಕಟಣೆ ಬಗ್ಗೆ ಗಮನ ಸೆಳೆದಿರುವ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರು, ಇದು ತಮ್ಮನ್ನು ಆಯ್ಕೆ ಮಾಡಿದ ಕ್ಷೇತ್ರದ ಜನರಿಗೆ ಸಿದ್ದರಾಮಯ್ಯರವರು ಮಾಡಿದ ಅವಮಾನ ಎಂದಿದ್ದಾರೆ.
ಇದನ್ನೂ ಓದಿ: ಜನವರಿ 29ರಿಂದ ಬಜೆಟ್ ಅಧಿವೇಶನ: ಫೆಬ್ರವರಿ 1ಕ್ಕೆ ಕೇಂದ್ರ ಬಜೆಟ್ ಮಂಡನೆ
ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರತೀಕವಾದ ಪಂಚಾಯತ್ ರಾಜ್ ವ್ಯವಸ್ಥೆಗೆ ಮಾಡಿದ ಮಾಡಿದ ಅವಮಾನ ಮತ್ತು ಪಂಚಾಯತ್‌ರಾಜ್ ವ್ಯವಸ್ಥೆಯ ಕುರಿತಾಗಿ ಅವರಿಗೆ ಇರುವ ತಿರಸ್ಕಾರದ ಪ್ರತಿಬಿಂಬ. ಸಿದ್ದರಾಮಯ್ಯ ಅವರ ಈ ಅತಿರೇಕದ ವರ್ತನೆಗೆ ಮುಂದಿನ ದಿನಗಳಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ಇದೆ ವೇಳೆ ಕಿಡಿಕಾರಿದರು.
ಇದನ್ನೂ ಓದಿ: ರಾಮನಗರ: ಶಕ್ತಿ ಬ್ಯಾಟರೀಸ್ ಕಂಪನಿಯಲ್ಲಿ ಭಾರಿ ಅಗ್ನಿ ಅವಘಡ