ಅಧ್ಯಕ್ಷ ಅಮಿತ್ ಶಾ ಇನ್ನೂರು ಬಾರಿ ಕರ್ನಾಟಕಕ್ಕೆ ಬಂದರೂ ಮುಂಬರುವ ಚುನಾವಣೆಯಲ್ಲಿ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ, ಜೆಡಿಎಸ್ ಪಕ್ಷಗಳ ನಾಯಕರು, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಎಚ್.ಡಿ.ಕುಮಾರಸ್ವಾಮಿ ಅವರಿಗೆ ನಾನೇ ಟಾರ್ಗೆಟ್ ಆಗಿದ್ದೇನೆ. ಹೀಗಾಗಿ ನನ್ನ ಕೈಹಿಡಿಯುವವರು ಯಾರು? ನೀವೇ ನನ್ನ ಕೈಹಿಡಿಯಬೇಕೆಂದು ಜನತೆಗೆ ಮನವಿ ಮಾಡಿದರು. ಚುನಾವಣೆ ಸಂದರ್ಭದಲ್ಲಿ ಎಚ್.ಡಿ.ದೇವೇಗೌಡರು ಬಂದು ಅತ್ತರೆ ಮರುಳಾಗಬೇಡಿ. ಮುಂಬರುವ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಆಶೀರ್ವಾದ ಮಾಡಿ
ಎಂದು ಮನವಿ ಮಾಡಿದರು.
Advertisement
ಅಭ್ಯರ್ಥಿಗಳ ಘೋಷಣೆ: ಮುಂಬರುವ ವಿಧಾನಸಭೆ ಚುನಾವಣೆಗೆ ಹುಣಸೂರು ಕ್ಷೇತ್ರಕ್ಕೆ ಮಂಜುನಾಥ ಹಾಗೂ ಎಚ್.ಡಿ.ಕೋಟೆ ಕ್ಷೇತ್ರಕ್ಕೆ ಚಿಕ್ಕಮಾದು ಪುತ್ರ ಅನಿಲ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿಗಳನ್ನಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಣಸೂರಿನಲ್ಲಿ ಘೋಷಿಸಿದರು.