Advertisement

ವರುಣಾ- ಕೋಲಾರ.. ಕ್ಷೇತ್ರ ಯಾವುದಯ್ಯಾ? ಮತ್ತಷ್ಟು ಗೊಂದಲ ಮೂಡಿಸಿದ ಸಿದ್ದರಾಮಯ್ಯ ಹೇಳಿಕೆ

06:32 PM Mar 21, 2023 | Team Udayavani |

ಮೈಸೂರು: ಸಿದ್ದರಾಮಯ್ಯ ಅವರ ಕ್ಷೇತ್ರ ಗೊಂದಲ ಇನ್ನೂ ಮುಗಿದಂತೆ ಕಾಣುತ್ತಿಲ್ಲ. ಯಾಕೆಂದರೆ ಒಮ್ಮೆ ವರುಣಾ ಕ್ಷೇತ್ರದಲ್ಲಿ ಮಗ ಸ್ಪರ್ಧೆ ಮಾಡುತ್ತಾನೆ ಎಂದರೆ ಮತ್ತೊಮ್ಮೆ ತಾನೇ ಸ್ಪರ್ಧಿಸಬಹುದು ಎನ್ನುತ್ತಿದ್ದಾರೆ.

Advertisement

ನಾನು ಎಲ್ಲೇ ಸ್ಪರ್ಧೆಸಿದರೂ ಗೆಲ್ಲುವ ವಿಶ್ವಾಸವಿದೆ. ನಾನು ಕ್ಷೇತ್ರಗಳನ್ನು ಹುಡುಕುತ್ತಿಲ್ಲ. ನನನ್ನು ಕ್ಷೇತ್ರಕ್ಕೆ ಕರೆಯುವವರ ಸಂಖ್ಯೆ ಹೆಚ್ಚಾಗಿದೆಯಷ್ಟೇ. ನಾನು ಕ್ಷೇತ್ರ ಹುಡುಕುತ್ತಿದ್ದೇನೆ ಎಂಬುದೆಲ್ಲಾ ತಪ್ಪು ಗ್ರಹಿಕೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇನ್ನೂ ಕ್ಷೇತ್ರದ ಬಗ್ಗೆ ಯಾವುದೇ ಗುಟ್ಟು ಬಿಟ್ಟುಕೊಡಲಿಲ್ಲ.

ನಾಳೆ ಒಂದೇ ಹೆಸರು ಇರುವ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಅದರಲ್ಲಿ ನನ್ನ ಹೆಸರು ಇರುತ್ತದೆಯೋ ಗೊತ್ತಿಲ್ಲ. ವರುಣ ಕ್ಷೇತ್ರದಲ್ಲಿ ಯತೀಂದ್ರ ಹೆಸರು ಅಂತಿಮವಾಗಿದೆ. ಆದರೆ ಹೈ ಕಮಾಂಡ್ ಏನು ಮಾಡುತ್ತದೆಂದು ಗೊತ್ತಿಲ್ಲ. ನಾನು ಎಲ್ಲಾ ಆಯ್ಕೆಯನ್ನು ಹೈ ಕಮಾಂಡ್ ಗೆ ಬಿಟ್ಟಿದ್ದೇನೆ. ಮನೆಯವರ ಅಭಿಪ್ರಾಯವನ್ನು ಕೇಳುತ್ತಿದ್ದೇನೆ. ಹೈಕಮಾಂಡ್ ನಿರ್ಧಾರವೇ ನನ್ನ ನಿರ್ಧಾರ ಎಂದರು.

ಒಂದು ಬಾರಿ ವರುಣಾ ಕ್ಷೇತ್ರಕ್ಕೆ ಡಾ.ಯತೀಂದ್ರ ಸಿದ್ದರಾಮಯ್ಯ ಅವರೇ ಅಭ್ಯರ್ಥಿ ಎಂದ ಸಿದ್ದರಾಮಯ್ಯ ಮತ್ತೊಮ್ಮೆ ವರುಣಾ ಕ್ಷೇತ್ರಕ್ಕೆ ತಾವು ಬರುವುದನ್ನು ತಳ್ಳಿ ಹಾಕುವಂತಿಲ್ಲ ಎಂದರು.

Advertisement

ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಕೋಲಾರ ಜನರಿಗೂ ಹೈಕಮಾಂಡ್ ಜೊತೆ ಚರ್ಚೆ ಮಾಡಿ ತಿಳಿಸುತ್ತೇನೆ ಎಂದು ಹೇಳಿದ್ದೇನೆ. ಬಾದಾಮಿ, ಕೋಲಾರ, ವರುಣ ನನ್ನ ಆಯ್ಕೆ.  ನನ್ನ ಅರ್ಜಿಯಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದೇನೆ ಅಂತ ಬರೆದಿದ್ದೇನೆ. ನಾನು ಎಲ್ಲಿ ಸ್ಪರ್ಧಿಸಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತೆ.  ಹೈಕಮಾಂಡ್ ತೀರ್ಮಾನ ಮಾಡಿದರೆ ನಾಳೆಯೇ ಗೊಂದಲಕ್ಕೆ ತೆರೆ ಬೀಳಬಹುದು ಎಂದು ಸಿದ್ದರಾಮಯ್ಯ ಅವರು ಒಂದೇ ಬಾರಿ ಎರಡೆರಡು ರೀತಿ ಹೇಳಿಕೆ ಕೊಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next