Advertisement

ಕಳೆದ ಬಾರಿ ಪ್ರವಾಹದಿಂದಾದ ನಷ್ಟವೆಷ್ಷು? ಖರ್ಚಾದ ಹಣವೆಷ್ಟು? ಸಿದ್ದರಾಮಯ್ಯ ಪ್ರಶ್ನೆ

02:02 PM Aug 09, 2020 | keerthan |

ಬೆಂಗಳೂರು: ಕಳೆದ ವರ್ಷದ ಅತಿವೃಷ್ಟಿಯ ಹಾನಿಗೆ ಪರಿಹಾರ ಕಲ್ಪಿಸಲು ವಿಫಲವಾಗಿರುವ ಕಾರಣದಿಂದಾಗಿಯೇ ಈ ಬಾರಿಯ ಅತಿವೃಷ್ಟಿಗೆ ರಾಜ್ಯ ಸರ್ಕಾರ ಕೈಕಾಲು ಬಿಡುತ್ತಿದೆ. ಕಳೆದ ತಿಂಗಳೇ ಪತ್ರ ಬರೆದು ಎಚ್ಚರಿಸಿದ್ದೆ, ಎಂದಿನಂತೆ ಸರ್ಕಾರದಿಂದ ಉತ್ತರ ಇಲ್ಲ. ಈಗ ಬೆಂಕಿ ಬಿದ್ದ ಮೇಲೆ ಬಾವಿ ತೋಡಲು ಹೊರಟಿದೆ ಎಂದು ಸಿದ್ದರಾಮಯ್ಯ ಟೀಕೆ ಮಾಡಿದ್ದಾರೆ.

Advertisement

ಈ ಬಗ್ಗೆ ಟ್ವಿಟ್ ಮಾಡಿರುವ ಸಿದ್ದರಾಮಯ್ಯ ಬಿಎಸ್ ವೈ ಸಂಪುಟದ ಸಚಿವರಿಗೆ ಹಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ

ಕಳೆದ ವರ್ಷದ ಪ್ರವಾಹದಿಂದ ಹಾನಿಗೊಳಗಾದ ರಸ್ತೆ, ಸೇತುವೆ, ಸರ್ಕಾರಿ ಕಟ್ಟಡಗಳೆಷ್ಟು? ಅವುಗಳಲ್ಲಿ ಎಷ್ಟು ಪೂರ್ಣವಾಗಿ ದುರಸ್ತಿಗೊಂಡಿವೆ? ಖರ್ಚಾಗಿರುವ ಹಣ ಎಷ್ಟು? ಬಾಕಿ ಉಳಿದಿರುವ ಕಾಮಗಾರಿಗಳೆಷ್ಟು? ಈಗಲಾದರೂ ಈ ವಿವರ ನೀಡುವಿರಾ ಎಂದು ಗೋವಿಂದ ಕಾರಜೋಳ ಅವರನ್ನು ಪ್ರಶ್ನಿಸಿದ್ದಾರೆ

ಕಳೆದ ವರ್ಷದ ಅತಿವೃಷ್ಟಿಯಿಂದ ಹಾನಿಗೀಡಾದ ಮನೆಗಳಿಗೆ ನೀಡಿದ ಪರಿಹಾರ ಎಷ್ಟು? ಕಟ್ಟಿದ ಹೊಸ ಮನೆಗಳೆಷ್ಟು? ಪ್ರತಿ ಬಾರಿ ನೆರೆ ನೀರಿನಲ್ಲಿ ಮುಳುಗುವ ಮನೆಗಳೆಷ್ಟು? ಎಷ್ಟು ಕುಟುಂಬಗಳು ಶೆಡ್‌ನಲ್ಲಿವೆ? ಎಷ್ಟು ಕುಟುಂಬಗಳು ಬಾಡಿಗೆ ಮನೆಯಲ್ಲಿವೆ? ಈ‌ ಮಾಹಿತಿ ನೀಡುವಿರಾ ಎಂದು ಸಚಿವ ಸೋಮಣ್ಣ ಅವರನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕಳೆದ ವರ್ಷದ ಅತಿವೃಷ್ಟಿಯಿಂದ ಹಾನಿಗೀಡಾದ ಸರ್ಕಾರಿ ಶಾಲಾ ಕಟ್ಟಡಗಳೆಷ್ಟು? ಎಷ್ಟು ಕಟ್ಟಡಗಳನ್ನು ದುರಸ್ತಿ ಪಡಿಸಲಾಗಿದೆ ಮತ್ತು ಪುನರ್ ನಿರ್ಮಿಸಿಗೊಳ್ಳಲಾಗಿದೆ? ದುರಸ್ತಿಗೆ ಬಾಕಿ ಉಳಿದಿರುವುದು ಎಷ್ಟು? ಇದಕ್ಕಾಗಿ ಖರ್ಚಾದ ಹಣ ಎಷ್ಟು? ಈಗಲಾದರೂ ವಿವರ ನೀಡಬಹುದೇ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಕೇಳಿದ್ದಾರೆ.

Advertisement

ಕಳೆದ ವರ್ಷದ ಅತಿವೃಷ್ಟಿಯಿಂದ ಹಾನಿಗೀಡಾದ ಅಂಗನವಾಡಿ ಕಟ್ಟಡಗಳೆಷ್ಟು? ಅವುಗಳಲ್ಲಿ ದುರಸ್ತಿವಾಗಿರುವುದೆಷ್ಟು? ಪುನರ್ ನಿರ್ಮಾಣವಾಗಿದ್ದೆಷ್ಟು? ಇವುಗಳ ದುರಸ್ತಿ-ಪುನರ್ ನಿರ್ಮಾಣಕ್ಕೆ ಖರ್ಚಾದ ಹಣ ಎಷ್ಟು ಎಂದು ಸಚಿವೆ ಶಶಿಕಲಾ ಜೊಲ್ಲೆ ಅವರ ಬಳಿ ಸಿದ್ದರಾಮಯ್ಯ ವಿವರ ಕೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next