Advertisement

ಪ್ರವಾಹ ಭೀತಿ ಹಿನ್ನಲೆ ಬಾದಾಮಿ ಕ್ಷೇತ್ರದಲ್ಲಿ ಮುನ್ನೆಚ್ಚರಿಕೆ ವಹಿಸಲು ಸಿದ್ದರಾಮಯ್ಯ ಸೂಚನೆ

04:17 PM Aug 09, 2020 | Team Udayavani |

ಬೆಂಗಳೂರು: ಪ್ರವಾಹ ಭೀತಿ ಎದುರಿಸುತ್ತಿರುವ ಬಾದಾಮಿ ವಿಧಾನಸಭೆ ಕ್ಷೇತ್ರದ ಗ್ರಾಮಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement

ಜಿಲ್ಲಾಧಿಕಾರಿ ಕ್ಯಾ.ರಾಜೇಂದ್ರ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಸಿದ್ದರಾಮಯ್ಯ ಅವರು, ಈಗಾಗಲೇ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಸಧ್ಯಕ್ಕೆ ಪ್ರವಾಹ ಸಾಧ್ಯತೆ ಇಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

ಇದೇ ವೇಳೆ ಬಾದಾಮಿ ತಹಶೀಲ್ದಾರರ ಜೊತೆಗೂ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿದರು. ಮುಳುಗಡೆ ಭೀತಿ ಎದುರಿಸುತ್ತಿರುವ ಗ್ರಾಮಗಳ ಬಗ್ಗೆ ನಿಗಾ ವಹಿಸುವಂತೆ ಅವರು ಸೂಚಿಸಿದರು.

ಕೋವಿಡ್-19 ಸೋಂಕು ಕುರಿತಾಗಿಯೂ‌ ತಹಶೀಲ್ದಾರರಿಂದ ಮಾಹಿತಿ‌ ಪಡೆದುಕೊಂಡ ಸಿದ್ದರಾಮಯ್ಯ ಅವರು, ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಲೋಪವಾಗದಂತೆ ನೋಡಿಕೊಳ್ಳಲು ಸೂಚಿಸಿದರು. ಸೋಂಕು ನಿಯಂತ್ರಣಕ್ಜೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಿದ್ದರಾಮಯ್ಯ ಅವರು ಸೂಚಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next